Latestಉಡುಪಿಕರಾವಳಿಕೇರಳಕ್ರೈಂಮಂಗಳೂರುಸಿನಿಮಾ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದನಿಗೆ ಹೃದಯಘಾತ..! ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ನಿಧನ..!

1.3k

ನ್ಯೂಸ್ ನಾಟೌಟ್: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ಕಾಂತಾರ 1 ಸಿನಿಮಾ ಈಗ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಚಿತ್ರದಲ್ಲಿ ನಟಿಸಿದ ಒಬ್ಬೊಬ್ಬರೇ ಕಲಾವಿದರು ಮೃತಪಡುತ್ತಿರುವುದು. ಈ ಮೊದಲ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಒಬ್ಬರು ನಿಧನ ಹೊಂದಿದ್ದರು. ಇದಾದ ಬಳಿಕ ಚಿತ್ರದ ಕಲಾವಿದ ರಾಕೇಶ್ ಪೂಜಾರಿ ಮೃತಪಟ್ಟರು. ಈಗ ಸಿನಿಮಾದ ಮತ್ತೋರ್ವ ಜೂನಿಯರ್ ಕಲಾವಿದ ಜೂ.11 ಕೊನೆಯುಸಿರು ಎಳೆದಿದ್ದಾರೆ.

ಈ ಮೂಲಕ ಕೆಲವೇ ತಿಂಗಳ ಅಂತರದಲ್ಲಿ ಚಿತ್ರದ ಮೂವರು ಮೃತಪಟ್ಟಂತೆ ಆಗಿದೆ. ವಿಜು ವಿಕೆ ಎಂಬುವವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಕೇರಳದ ತ್ರಿಶೂರ್ ​ನವರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಶೂಟ್​ಗಾಗಿ ಕರ್ನಾಟಕಕ್ಕೆ ಬಂದಿದ್ದರು. ಆಗುಂಬೆಯ ಸಮೀಪದ ಹೋಂ ಸ್ಟೇನಲ್ಲಿ ಉಳಿದುಕೊಂಡಿದ್ದರು.

Kantara Death copy

ಜೂನ್ 11ರಂದು ರಾತ್ರಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನ ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ನಿಧನ ಹೊಂದಿದ್ದಾರೆ. ಕೇರಳದಿಂದ ಕುಟುಂಬಸ್ಥರು ಬಂದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.

ಮಂಗಳೂರು :ಈ ಹಿಂದಿನ ಪೊಲೀಸ್ ಕಮಿಷನರ್ ಮತ್ತು ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆಗೆ ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದ ಯು.ಟಿ.ಖಾದರ್..! ಎನಿದು ಆರೋಪ..?

See also  ಸುಳ್ಯ: ಎಸ್ಎಸ್ಎಫ್ ಸುಳ್ಯ ಡಿವಿಷನ್ ನ ಆಂಬ್ಯುಲೆನ್ಸ್ ಲೋಕಾರ್ಪಣೆ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget