Latestಉಡುಪಿಕರಾವಳಿಮಂಗಳೂರುವೈರಲ್ ನ್ಯೂಸ್ಸಿನಿಮಾ

‘ಕಾಂತಾರ ಚಾಪ್ಟರ್ 1’ ಚಿತ್ರೀಕರಣದ ವೇಳೆ ಜಲಾಶಯದಲ್ಲಿ ಮಗುಚಿದ ಬಿದ್ದ ದೋಣಿ..! ರಿಷಬ್‌ ಶೆಟ್ಟಿ ಸೇರಿ 30 ಮಂದಿ ಪ್ರಾಣಾಪಾಯದಿಂದ ಪಾರು..!

780

ನ್ಯೂಸ್ ನಾಟೌಟ್: ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ-1’ ಚಿತ್ರತಂಡಕ್ಕೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಲೇ ಇದೆ. 2 ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಚಿತ್ರೀಕರಣದ ವೇಳೆ ದೋಣಿ ಮಗುಚಿ ಬಿದ್ದ ಘಟನೆ ನಡೆದಿದೆ.

ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ‘ಕಾಂತಾರ’-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ಶನಿವಾರ(ಜೂ.14) ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್‌ ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದ್ದು, ಒಂದರ ಹಿಂದೆ ಒಂದರಂತೆ ಘಟನೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇದೀಗ ಭಯಭೀತಗೊಂಡಿದೆ ಎನ್ನಲಾಗಿದೆ.

ಏರ್‌ ಇಂಡಿಯಾ ವಿಮಾನ ದುರಂತದ ತನಿಖೆಗೆ 3 ತಿಂಗಳ ಡೆಡ್‌ ಲೈನ್..! ಬ್ಲ್ಯಾಕ್‌ ಬಾಕ್ಸ್‌ ದತ್ತಾಂಶವನ್ನು ಡಿಕೋಡ್‌ ಮಾಡಲಾಗುತ್ತಿದೆ ಎಂದ ಕೇಂದ್ರ ವಿಮಾನಯಾನ ಸಚಿವ

See also  ಕಟೀಲು ದುರ್ಗೆ, ಬಪ್ಪನಾಡು ದುರ್ಗೆ, ಮಂಗಳಾಂಬೆಗೆ ತಿರಂಗದ ಅಲಂಕಾರ, ನೋಡ ಬನ್ನಿ ನಮ್ಮೂರ ದೇವಿಯರ ಚೆಂದವ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget