ಕರಾವಳಿಕ್ರೀಡೆ/ಸಿನಿಮಾದೈವಾರಾಧನೆ

‘ಕಾಂತಾರ 2’ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಮಲೆಯಾಳಂ ಖ್ಯಾತ ನಟ ಮೋಹನ್ ಲಾಲ್..? ಈ ಫೋಟೋ ಹೇಳುತ್ತಿದೆ ನೂರು ಕಥೆ

ನ್ಯೂಸ್ ನಾಟೌಟ್: ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದ್ದು ಎಲ್ಲರಿಗೂ ಗೊತ್ತಿದೆ. ಭರ್ಜರಿಯಾಗಿ ಸದ್ದು ಮಾಡಿದ್ದ ಸಿನಿಮಾದ ಎರಡನೇ ಭಾಗವೂ ಆದಷ್ಟು ಬೇಗ ತೆರೆಗೆ ಬರುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ನಡುವೆ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್ ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಈಗ ರಿಷಬ್ ಶೆಟ್ಟಿ ಅವರು ಮಲಯಾಳಂನ ಖ್ಯಾತ ನಟ ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದಾರೆ. ‘ಕಾಂತಾರ 2’ ಸಿನಿಮಾದಲ್ಲಿ ಮೋಹನ್​ಲಾಲ್ ನಟಿಸಲಿದ್ದಾರಾ ಎಂಬ ಕುತೂಹಲ ಸಿನಿರಸಿಕರಲ್ಲಿ ಹೆಚ್ಚಾಗಿದೆ.

ಲೆಜೆಂಡರಿ ಮೋಹನ್​ಲಾಲ್ (Kantara Movie) ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು. ಮೊದಲ ಭಾಗದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ‘ಕಾಂತಾರ: ಚಾಪ್ಟರ್ 1’ನಲ್ಲಿ ಸಪ್ತಮಿ ನಟಿಸುತ್ತಿಲ್ಲ ಎಂದು ನಟಿಯೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದರು. ಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

Related posts

ಸಂಪಾಜೆ, ಕಲ್ಲುಗುಂಡಿಯಲ್ಲಿ ಪ್ರವೀಣ್ ನೆಟ್ಟಾರ್ ಹಂತಕನ ಹೆಜ್ಜೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುಳ್ಯಕ್ಕೆ ಆಗಮನ ,ಕಾಂಗ್ರೆಸ್ ನಾಯಕರಿಂದ ಅದ್ದೂರಿ ಸ್ವಾಗತ

ಅಶ್ವಿನಿ ಪುನೀತ್ ರಾಜ್​ಕುಮಾರ್ ಫೋಟೋ ಬಳಸಿ ಡೀಪ್ ಫೇಕ್ ವಿಡಿಯೋ ಹಂಚಿಕೊಂಡ ವ್ಯಕ್ತಿ..! ಫಿಲ್ಮ್ ಚೇಂಬರ್ ​ಗೆ ದೂರು ನೀಡಿದ ಅಭಿಮಾನಿಗಳು..!