ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಕರಾವಳಿಯ ಮೂವರು ನಾಯಕರಿಗೆ ಮಂತ್ರಿ ಸ್ಥಾನ ಖಚಿತಗೊಂಡಿದೆ. ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಂಗಾರ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಆಯ್ಕೆಯಾಗಿದ್ದು ಕರಾವಳಿ ಭಾಗದ ಜನರು ಸಂತಸಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಂದು ಕರಾವಳಿ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳು ನಡೆಯಲಿ ಅನ್ನುವುದು ಪ್ರತಿಯೊಬ್ಬ ನಾಗರಿಕನ ಆಶಯವಾಗಿದೆ.