ಕರಾವಳಿಸುಳ್ಯ

ಸುಳ್ಯ: ಅಕ್ರಮ ಮರಸಾಗಾಟ ಪತ್ತೆ:ಬೆಲೆ ಬಾಳುವ ಮರಗಳು ವಶಕ್ಕೆ

158

ನ್ಯೂಸ್ ನಾಟೌಟ್ : ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ವರದಿಯಾಗಿದೆ.ಮಂಗಳವಾರ ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಆಲೆಟ್ಟಿ ಗ್ರಾಮದ ಪೈಂಬೆಚ್ಚಾಲ್‌ ಭಾಗದಿಂದ ವರದಿಯಾಗಿದೆ.ಸುಳ್ಯ ಅರಣ್ಯಾಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಪೈಂಬೆಚ್ಚಾಲು ಸಮೀಪ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ತಿಳಿದು ಬಂದಿದ್ದು, ಖಚಿತ ಮಾಹಿತಿ ಮೇರೆಗೆ ಕೂಡಲೇ ಕಾರ್ಯಪ್ರವೃತ್ತರಾದ ಅರಣ್ಯಾಧಿಕಾರಿಗಳು ಕಾದು ನಿಂತು ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಪತ್ತೆ ಹಚ್ಚಿದ್ದಾರೆ.

ಇದರಲ್ಲಿ ಒಂದು ಮಿನಿ ಲಾರಿ ಹಾಗೂ ಒಂದು ಪಿಕಪ್‌ ವಾಹನ ವೆಂದು ತಿಳಿದು ಬಂದಿದೆ. ಈ ಸಂದರ್ಭ ಎರಡೂ ವಾಹನಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.ವಾಹನ ಮತ್ತು ಮರಗಳನ್ನು ವಶಕ್ಕೆ ಪಡೆದಿದ್ದಲ್ಲದೇ ಮರಸಾಗಾಟ ಮಾಡುತ್ತಿದ್ದವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವುದಾಗಿಯೂ ತಿಳಿದು ಬಂದಿದೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಒತ್ತಿ 👇

https://www.facebook.com/NewsNotOut2023/videos/746971337194551/?extid=CL-UNK-UNK-UNK-AN_GK0T-GK1C&mibextid=NnVzG8

See also  ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ಸ್ಥಾಪನೆಗೆ ಸರ್ಕಾರ ಅನುಮೋದನೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget