ಕರಾವಳಿಸುಳ್ಯ

ಸುಳ್ಯ:ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮಹಡಿ ಮೇಲಿಂದ ಬಿದ್ದು ಕೊನೆಯುಸಿರು..!ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು ಈ ನಿರ್ಧಾರಕ್ಕೆ ಬರಲು ಕಾರಣವೇನು?

81
Spread the love

ನ್ಯೂಸ್‌ ನಾಟೌಟ್‌ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಅದೇ ಆಸ್ಪತ್ರೆಯ ಮಹಡಿಯ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ(ಫೆ.೭ರಂದು) ಬಗ್ಗೆ ಸುಳ್ಯದಿಂದ ವರದಿಯಾಗಿದೆ.ಪುತ್ತೂರು ತಿಂಗಳಾಡಿ ನಿವಾಸಿ ವಸಂತ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ವಸಂತ ಎಂಬವರು ಇಂದು ಮುಂಜಾನೆ ವೇಳೆ ಸುಮಾರು 6 ಗಂಟೆಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಸಂತ ಅವರು ಕಳೆದ ಮೂರು ದಿನಗಳ ಹಿಂದೆ ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೂಲಿ ಕೆಲಸ ಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದ ಇವರು ಪಿಟ್ಸ್ ಕಾಯಿಲೆಗೆ ಒಳಗಾಗುತ್ತಿದ್ದರು ಎಂದು ತಿಳಿದುಬಂದಿದೆ.ಈ ನಿಮಿತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಒರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

See also  ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು 2.60 ಲಕ್ಷ ರೂ. ಮೌಲ್ಯದ ಚಿನ್ನ ದೋಚಿದ ಐನಾತಿ ಕಳ್ಳಿಯರು ಅರೆಸ್ಟ್
  Ad Widget   Ad Widget   Ad Widget   Ad Widget   Ad Widget   Ad Widget