Latestಕೊಡಗು

ಕೊಡಗು:ಪೊನ್ನಂಪೇಟೆಯಲ್ಲಿ ಕತ್ತಿಯಿಂದ ಕೊಚ್ಚಿ ನಾಲ್ವರ ಬರ್ಬರ ಹತ್ಯೆ ಪ್ರಕರಣ:ಪೊಲೀಸರ ಮಿಂಚಿನ ಕಾರ್ಯಾಚರಣೆ;ಆರೋಪಿ ಬಂಧನ

660
Spread the love

ನ್ಯೂಸ್‌ ನಾಟೌಟ್: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ಮಾರ್ಚ್‌ ೨೮ರಂದು ಸಂಭವಿಸಿತ್ತು.ಒಂದೇ ಮನೆಯ ನಾಲ್ವರನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿತ್ತು.ಈ ಘಟನೆ ಕೇಳಿ ಒಂದು ಕ್ಷಣ ಎಲ್ಲರೂ ಶಾಕ್ ಗೊಳಗಾಗಿದ್ದರು.ಘಟನೆ ನಡೆದು ಕೆಲವೇ ಕ್ಷಣದಲ್ಲಿ ಪೊನ್ನಂಪೇಟೆ ಠಾಣಾ ಪೊಲಿಸರು ಸೇರಿದಂತೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು.

ಇದೀಗ ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಗೂರು ಗ್ರಾಮದಲ್ಲಿ ಪತ್ನಿ ಸೇರಿದಂತೆ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಗಿರೀಶ್ ನನ್ನು ಮಿಂಚಿನ ಕಾರ್ಯಾಚರಣೆಯ ಮೂಲಕ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಕೇರಳ ರಾಜ್ಯದ ತಲಪುಳ ಎಂಬ ಪ್ರದೇಶದಲ್ಲಿ ಗಿರೀಶ್ (38) ನನ್ನು ವಶಕ್ಕೆ ಪಡೆದಿದ್ದಾರೆ.ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ಒಂಟಿ ಗುಡಿಸಲಿನಲ್ಲಿ ವಾಸವಿದ್ದ ಬುಡಕಟ್ಟು ಜನಾಂಗದ ಕರಿಯ (75), ಗೌರಿ (70), ನಾಗಿ(30) ಹಾಗೂ ನಾಗಿಯ ಪುತ್ರಿ ಕಾವೇರಿ(7)ಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಗಿರೀಶ್ ತಲೆಮರೆಸಿಕೊಂಡಿರುವ ಆರೋಪದಡಿ ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಮೈಸೂರು ದಕ್ಷಿಣ ವಲಯ ಐಪಿಎಸ್ ಡಾ||ಎಂ.ಬಿ.ಬೋರಲಿಂಗಯ್ಯ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಐಪಿಎಸ್, ಅಪರ ಪೊಲೀಸ್ ಅಧೀಕ್ಷಕ ಸುಂದರ್ ರಾಜ್.ಕೆ.ಎಸ್ ಅವರ ಮಾರ್ಗದರ್ಶನದಲ್ಲಿ ವಿರಾಜಪೇಟೆ ಉಪವಿಭಾಗದ ಡಿವೈಎಸ್ ಪಿ ಮಹೇಶ್ ಕುಮಾರ್.ಎಸ್, ಗೋಣಿಕೊಪ್ಪ ವೃತ್ತದ ಸಿಪಿಐ ಶಿವರಾಜ್ ಮುಧೋಳ್, ಪೊನ್ನಂಪೇಟೆ ಪೊಲೀಸ್ ಠಾಣೆಯ ಪಿಎಸ್ಐ ನವೀನ್.ಜಿ, ಅಪರಾಧ ಪತ್ತೆ ತಜ್ಞರ ತಂಡ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.ಆರೋಪಿ ಗಿರೀಶ್ ನಾಗಿಯ 3ನೇ ಪತಿಯಾಗಿದ್ದು, ಒಂದು ವರ್ಷದಿಂದ ಒಟ್ಟಿಗೆ ವಾಸಿಸುತ್ತಿದ್ದರು. 2ನೇ ಗಂಡನಾದ ಸುಬ್ರಮಣಿಯೊಂದಿಗೆ ನಾಗಿ ಮತ್ತೆ ಸಂಬಂಧ ಹೊಂದಿರುವ ಬಗ್ಗೆ ಸಂಶಯಗೊಂಡು ಮಾ.27ರಂದು ರಾತ್ರಿ ಗಿರೀಶ್ ನಾಲ್ವರನ್ನು ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

See also  ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ! ಈ ಬಗ್ಗೆ ಕರ್ನಾಟಕದ ಸಿಂಗಂ ಅಣ್ಣಾಮಲೈ ಹೇಳಿದ್ದೇನು?
  Ad Widget   Ad Widget   Ad Widget   Ad Widget