ಕ್ರೈಂ

ಕಾರ್ಕಳ : ಭೀಕರ ಅಪಘಾತ, ರಿಕ್ಷಾ ಚಾಲಕ ಸಾವು, ಮಧ್ಯಪಾನ ಮಾಡಿದ್ದೇ ಅಪಘಾತಕ್ಕೆ ಕಾರಣ?

969

ಕಾರ್ಕಳ : ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ಟವೇರ ಕಾರು ಹಾಗು ರಿಕ್ಷ ಡಿಕ್ಕಿ ಹೊಡೆದುಕೊಂಡ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ರಿಕ್ಷಾ ಚಾಲಕ ಅಂಡಾರು ಗ್ರಾಮದ ಬಾಳ್ಜೆ ನಿವಾಸಿ ಶೇಖರ ಮೂಲ್ಯ(58) ಎಂಬವವರು ಎಂದು ತಿಳಿದು ಬಂದಿದೆ.

ಶೇಖರ ಮೂಲ್ಯ ಕಾಡುಹೊಳೆ ಎಂಬಲ್ಲಿಂದ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು ವಾಪಾಸು ಕಾಡುಹೊಳೆ ರಿಕ್ಷಾ ಸ್ಟ್ಯಾಂಡ್ ಗೆ ಬರುತ್ತಿದ್ದಾಗ ದೊಂಡೇರಂಗಡಿ ಕಡೆಯಿಂದ ಅತೀ ವೇಗವಾಗಿ  ಬಂದ ಟವೇರಾ ವಾಹನ ನೂಜಿಗುರಿಯ ತಿರುವಿನಲ್ಲಿ ರಸ್ತೆಯ ಬಲಬದಿಗೆ ಬಂದು ಶೇಖರ ಮೂಲ್ಯ ಚಲಾಯಿಸುತ್ತಿದ್ದ ರಿಕ್ಷಾಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಶೇಖರ ಅವರ ತಲೆ ಹಾಗೂ ಕಾಲಿಗೆ ತೀವ್ರ ಗಾಯಗಳಾಗಿ, ರಿಕ್ಷಾ ನುಜ್ಜುಗುಜ್ಜಾಗಿದ್ದು  ಶೇಖರ ಮೂಲ್ಯ ಅವರ ದೇಹ ರಿಕ್ಷಾದೊಳಗೆ ಸಿಲುಕಿಕೊಂಡಿತ್ತು. ಬಳಿಕ ಸ್ಥಳೀಯರು ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು ಬದುಕುಳಿಯಲಿಲ್ಲ. ಅಪಘಾತವೆಸಗಿದ ಕಾರು ನಿಯಂತ್ರಣ ಕಳೆದುಕೊಂಡು ಬಲಬದಿಯ ಚರಂಡಿಗೆ ಮಗುಚಿ ಬಿದ್ದಿದೆ ಅಲ್ಲದೇ ಕಾರಿನ ಹಿಂಬದಿಯ ಚಕ್ರ ಕಿತ್ತುಹೋಗಿದ್ದು  ಅಪಘಾತದ ತೀವ್ರತೆಗೆ ಸಾಕ್ಷಿಯಾಗಿತ್ತು. ಮದ್ಯಪಾನ ಸೇವಿಸಿ ಕಾರು ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

See also  ಕಾರಿನ ಮೇಲೆ ಬಿದ್ದ ಬೃಹತ್ ಕಂಟೈನರ್ ಲಾರಿ, ಮಕ್ಕಳು ಸೇರಿದಂತೆ ಒಂದೇ ಕುಟುಂಬದ 6 ಮಂದಿ ದುರ್ಮರಣ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget