Latestಉಡುಪಿಕರಾವಳಿಕ್ರೈಂವೈರಲ್ ನ್ಯೂಸ್

ಕಾರ್ಕಳ: ಯುವತಿಯರನ್ನು ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ವ್ಯಕ್ತಿ..! ಕದ್ರಿ ಠಾಣೆ ಪೊಲೀಸರಿಂದ ಅರೆಸ್ಟ್..!

621
Pc Cr: Udayavani

ನ್ಯೂಸ್‌ ನಾಟೌಟ್ : ಸಾಮಾಜಿಕ ಜಾಲತಾಣ ಮೂಲಕ ಯುವತಿಯರ ಮೊಬೈಲ್ ಸಂಖ್ಯೆಗಳನ್ನು ಪಡೆದು ಅವರ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣ ಪಡೆಯುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಈದು ಗ್ರಾಮದ ಸತೀಶ್ ಹೊಸ್ಮಾರು (36) ಎಂಬಾತನನ್ನು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಯುವತಿಯರ ಮೊಬೈಲ್ ನಂಬರನ್ನು ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಐಡಿ ಮೂಲಕ ಪಡೆದು ಅವರಿಗೆ ನಿಮ್ಮ ಅಶ್ಲೀಲ ವಿಡಿಯೋ ನನ್ನಲ್ಲಿ ಇರುವುದಾಗಿ ಬೆದರಿಸಿ ಹಣಕ್ಕಾಗಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸುತ್ತಿದ್ದ ಎಂದು ಆರೋಪಿಸಿ ಮಹಿಳೆಯೊಬ್ಬರು ಕದ್ರಿ ಠಾಣೆಗೆ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಸತೀಶ್‌ ನನ್ನು ಬಂಧಿಸಿ ಮೊಬೈಲ್‌ ನ್ನು ವಶಕ್ಕೆ ಪಡೆದಿದ್ದಾರೆ.

ಮೊಬೈಲ್‌ ನಲ್ಲಿ ಕೃತ್ಯಕ್ಕೆ ಸಂಬಂಧಿಸಿ ದಾಖಲೆಗಳು ಲಭಿಸಿದೆ ಎನ್ನಲಾಗಿದೆ. ಆರೋಪಿ ಮೇಲೆ ಈಗಾಗಲೇ ಕಾರ್ಕಳ ಗ್ರಾಮಾಂತರ ಮತ್ತು ನಗರ ಠಾಣೆಯಲ್ಲಿ ಕಳವು, ಮಹಿಳೆಯ ಮಾನಭಂಗ, ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಒಂದು ವರ್ಷದ ಹಿಂದೆ ಕಾರ್ಕಳ ನಗರ ಠಾಣೆಯಲ್ಲಿ ಕಳವು ಕೇಸ್ ನಲ್ಲಿ ಜೈಲು ಶಿಕ್ಷೆಯನ್ನು ಅನುಭವಿಸಿ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

See also  ನೇಣು ಬಿಗಿದು ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ! ಆತಂಕದಲ್ಲಿ ಸ್ಥಳೀಯರು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget