ಕರಾವಳಿರಾಜಕೀಯ

ಕಾರ್ಕಳ :ಸಚಿವ, ಬಿಜೆಪಿ ಅಭ್ಯರ್ಥಿ ವಿ. ಸುನೀಲ್ ಕುಮಾರ್ ಬೆಳ್ಮಣ್ ಭೇಟಿ

ನ್ಯೂಸ್ ನಾಟೌಟ್ :ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಚುನಾವಣಾ ದಿನ ಹತ್ತಿರವಾಗುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದ್ದು, ಮತದಾರರ ಮನವೊಲಿಸಲು ಕಸರತ್ತು ನಡೆಸುತ್ತಿದ್ದಾರೆ. ಚುನಾವಣೆ ಪ್ರಚಾರ ಸಭೆಗಳು ನಡೆಯುತ್ತಿದ್ದು,ನಾಯಕರು, ಕಾರ್ಯಕರ್ತರೊಂದಿಗೆ ಅಭ್ಯರ್ಥಿಗಳು ಮತಬೇಟೆಯಲ್ಲಿ ತೊಡಗಿದ್ದಾರೆ.

ಈ ಹಿನ್ನಲೆಯಲ್ಲಿ ಕಾರ್ಕಳದ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಅವರು ಬೆಳ್ಮಣ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು.ಆ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತವನ್ನು ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಎಂದರು. ಈ ಸಂದರ್ಭ ಗ್ರಾಮಸ್ಥರು ಜನನಾಯಕ ಸುನೀಲ್ ಅವರನ್ನು ಪ್ರೀತಿಯಿಂದ ಸ್ವಾಗತಿಸಿದರು.

Related posts

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ‘ಆಟಿ ಉತ್ಸವ’

ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ಕೂಡ ನಿಷೇಧ: ಸಚಿವ ಪ್ರಿಯಾಂಕ್ ಖರ್ಗೆ

ಎಂಪಿ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಪತ್ತೆ..!