ಉಡುಪಿ

ಕಾರ್ಕಳ: ಸಹೋದರನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ಸಹೋದರಿಯ ದಾರುಣ ಅಂತ್ಯ..!, ನೊಂದ ಕುಟುಂಬಕ್ಕೆ ಮತ್ತೊಂದು ಶಾಕ್‌

ನ್ಯೂಸ್‌ ನಾಟೌಟ್‌: ಸಹೋದರನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ಆತನ ಸಹೋದರಿ ವಿದ್ಯುತ್‌ ಶಾಕ್‌ಗೊಳಗಾಗಿ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಕಾರ್ಕಳದ ನಿಟ್ಟೆ ಪರಪ್ಪಾಡಿ ಎಂಬಲ್ಲಿ ಸಂಭವಿಸಿದೆ.

ಮೃತ ಮಹಿಳೆಯನ್ನು ಲಲಿತಾ ಬೋಂಡ್ರ ಎಂದು ಗುರುತಿಸಲಾಗೆದೆ. ಈಕೆಯ ಸಹೋದರ ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಗಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು. ಈ ಸಂದರ್ಭ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನದ ಕಬ್ಬಿಣದ ಕಂಬವನ್ನು ಹಿಡಿಯುತ್ತಿದ್ದಂತೆ ಅವರು ವಿದ್ಯುತ್ ಆಘಾತಕ್ಕೊಳಗಾಗಿ ತಕ್ಷಣ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಶಾಮಿಯಾನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ‌ ಟ್ಯೂಬ್ ಲೈಟ್ ಅಳವಡಿಸಲಾಗಿತ್ತು. ಈ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯುಟ್ ಆಗಿ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Related posts

ಏಕಾಏಕಿ ಪಂಪ್‌ ಹೌಸ್‌ಗೆ ನುಗ್ಗಿದ ಕಾರು..! ಕಾರಿನಲ್ಲಿದ್ದ ಐವರು ಪವಾಡಸದೃಶ ಪಾರು..!

ಉಡುಪಿ: ಕೋಟಿ-ಚೆನ್ನಯರ ಕಾರ್ಣಿಕದಿಂದ 28 ವರ್ಷಗಳ ಬಳಿಕ ಮನೆಗೆ ಮರಳಿದ ಮಗ..! ಏನಿದು ಪವಾಡ..?

ಚಿಕ್ಕಮಗಳೂರು-ಉಡುಪಿ ಜಿಲ್ಲೆಯಗಳಲ್ಲಿ ನಕ್ಸಲರ ಓಡಾಟ..! ಗ್ರಾಮಸ್ಥರೊಂದಿಗೆ ಸಭೆ ನಡೆಸಿರುವ ಶಂಕೆ..!