ರಾಜ್ಯವೈರಲ್ ನ್ಯೂಸ್

ಕರ್ನಾಟಕ-ಆಂಧ್ರ ಗಡಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ಪತ್ತೆ..! ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಆಸಿಫ್

ನ್ಯೂಸ್ ನಾಟೌಟ್: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಆರೋಪಿಯಿಂದ 1200 ಜಿಲೆಟಿನ್ ಕಡ್ಡಿಗಳು, 7 ಬಾಕ್ಸ್ ವೈರ್, 6 ಡಿಟೋನೇಟರ್ ವಶಪಡಿಸಿಕೊಳ್ಳಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಬಳಿ ಸ್ಫೋಟಕ ಸಾಗಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

Related posts

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಬಾಂಬ್ ದಾಳಿ ಬೆದರಿಕೆ..! ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ನಂಟಿರೋ ಆತ ಯಾರು..?

ದರ್ಶನ್ ಪ್ರಕರಣ: ಪ್ರತ್ಯಕ್ಷ ದರ್ಶಿಗಳನ್ನು ಹೊರತು ಪಡಿಸಿ ಬರೋಬ್ಬರಿ 200 ಕ್ಕೂ ಹೆಚ್ಚು ಸಾಕ್ಷಿಗಳ ಸಂಗ್ರಹ..! ಇಲ್ಲಿದೆ ಸಂಪೂರ್ಣ ಮಾಹಿತಿ

ಹುಲಿ ಉಗುರು: ಜಗ್ಗೇಶ್‌ ಗೂ ಕಾದಿದೆಯಾ ಕಾನೂನು ಕಂಟಕ? ನವರಸ ನಾಯಕನ ಮನೆಗೂ ಇಂದು ಭೇಟಿ ನೀಡಲಿದ್ದಾರಾ ಅರಣ್ಯಾಧಿಕಾರಿಗಳು? ಇಲ್ಲಿದೆ ವೈರಲ್ ವಿಡಿಯೋ