ದೇಶ-ಪ್ರಪಂಚದೇಶ-ವಿದೇಶರಾಜ್ಯವೈರಲ್ ನ್ಯೂಸ್

ಕರ್ನಾಟಕದಂತೆ ಆಂಧ್ರದಲ್ಲೂ ಗ್ಯಾರಂಟಿಗಳು ಜಾರಿಗೆ..! ಮಹಿಳೆಯರಿಗೆ ಉಚಿತ ಪ್ರಯಾಣ, ಉಚಿತ ಎಲ್‌.ಪಿ.ಜಿ ಸಿಲಿಂಡರ್‌ ಸೇರಿದಂತೆ ಕಾಂಗ್ರೆಸ್ ಗ್ಯಾರಂಟಿಗಳನ್ನೂ ಮೀರಿಸುವ 6 ಸೂಪರ್ ಆಫರ್ ಗಳು..!

ನ್ಯೂಸ್ ನಾಟೌಟ್: ಚುನಾವಣೆಯಲ್ಲಿ ಹಲವು ಭರವಸೆ ನೀಡಿ ಆಂಧ್ರಪ್ರದೇಶದ ಅಧಿಕಾರ ಹಿಡಿದಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಈ ಭರವಸೆಯನ್ನು ಹೇಗೆ ಈಡೇರಿಸುತ್ತದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಹೇಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತೋ ಅದೇ ಮಾದರಿಯಲ್ಲಿ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ʼಸೂಪರ್‌ ಸಿಕ್ಸ್‌ ಗ್ಯಾರಂಟಿʼ ಹೆಸರಿನಲ್ಲಿ ಘೋಷಣೆ ಪ್ರಕಟಿಸಿದ್ದರು.

ಪ್ರತಿ ತಿಂಗಳು ನಿರುದ್ಯೋಗಿಗಳಿಗೆ 3000 ರೂ. ನಿರುದ್ಯೋಗ ಭತ್ಯೆ, ಶಾಲೆಗೆ ತೆರಲಳು ಪ್ರತಿ ಮಗುವಿಗೆ ವರ್ಷಕ್ಕೆ 15,000 ರೂ., ಪ್ರತಿ ರೈತರಿಗೆ ವಾರ್ಷಿಕ 20,000 ರೂ., ಸರ್ಕಾರದಿಂದ ಪ್ರತಿ ಮನೆಗೆ ವರ್ಷಕ್ಕೆ 3 ಗ್ಯಾಸ್‌ ಸಿಲಿಂಡರ್‌ ಉಚಿತ, 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1,500 ರೂ., ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಘೋಷಣೆಗಳನ್ನು ಟಿಡಿಪಿ ಘೋಷಣೆ ಮಾಡಿತ್ತು. ನಿರುದ್ಯೋಗಿ ಯುವಕರಿಗೆ ನಗದು ಪಾವತಿ, ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಉಚಿತ ಎಲ್‌ಪಿಜಿ ಸಿಲಿಂಡರ್‌ ಸೇರಿದಂತೆ ಹಲವು ಭರವಸೆಗಳನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಇವುಗಳನ್ನು ಈಡೇರಿಸಲು ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಸಾವಿರ ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಈ ವರ್ಷ ಮಂಡನೆಯಾದ ಬಜೆಟ್‌(ಲೇಖಾನುದಾನ)ನಲ್ಲಿ 2024-2025 ರಲ್ಲಿ ಆದಾಯ ಸ್ವೀಕೃತಿಯಿಂದ 2,05,352.19 ರೂ ಬಂದರೆ 2,30,110.41 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಕರ್ನಾಟಕದಲ್ಲಿ ಹೇಗೆ ಮನೆ ಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತೋ ಅದೇ ರೀತಿಯಾಗಿ ಆಂಧ್ರದಲ್ಲೂ ಟಿಡಿಪಿ ಮನೆಗೆ ಸೂಪರ್‌ ಸಿಕ್ಸ್‌ ಭರವಸೆಯ ಕಾರ್ಡ್‌ಗಳನ್ನು ಹಂಚಿಕೆ ಮಾಡಿತ್ತು ಎನ್ನಲಾಗಿದೆ.

Click 👇

https://newsnotout.com/2024/06/venkateshwara-temple-tirupati-crowd-by-leaves
https://newsnotout.com/2024/06/darshan-fans-issue-electric-device-kannada-news
https://newsnotout.com/2024/06/uppendra-real-star-kannada-news-darshan-video

Related posts

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ,ಈಜಿ ಮೇಲೇರಿ ಪ್ರಾಣ ಉಳಿಸಿಕೊಂಡ 7 ವರ್ಷದ ಬಾಲಕಿ..!

ರತನ್ ಟಾಟಾ ಕುಟುಂಬಕ್ಕೆ ನನ್ನ ಸಂತಾಪ ತಿಳಿಸಿ ಎಂದು ಮೋದಿಗೆ ಮನವಿ ಮಾಡಿದ ಇಸ್ರೇಲ್ ಪ್ರಧಾನಿ, ಭಾರತದ ಹೆಮ್ಮೆಯ ಪುತ್ರ ರತನ್ ಟಾಟಾ ಎಂದ ಬೆಂಜಮಿನ್ ನೆತನ್ಯಾಹು

ದರ್ಶನ್ ಪ್ರಕರಣ: ಪ್ರತ್ಯಕ್ಷ ದರ್ಶಿಗಳನ್ನು ಹೊರತು ಪಡಿಸಿ ಬರೋಬ್ಬರಿ 200 ಕ್ಕೂ ಹೆಚ್ಚು ಸಾಕ್ಷಿಗಳ ಸಂಗ್ರಹ..! ಇಲ್ಲಿದೆ ಸಂಪೂರ್ಣ ಮಾಹಿತಿ