ಕ್ರೈಂಬೆಂಗಳೂರುರಾಜಕೀಯರಾಜ್ಯ

ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ ಸಿಟಿ ರವಿ..! ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳಕ್ಕೆ..!

197

ನ್ಯೂಸ್ ನಾಟೌಟ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿ.ಟಿ.ರವಿ ನಡುವಿನ ಜಟಾಪಟಿ ರಾಜ್ಯಪಾಲರ ಅಂಗಳ ತಲುಪಿದೆ. ಇಂದು(ಡಿ.30) ಗರ್ವನರ್ ಅವರನ್ನು ಭೇಟಿ ಮಾಡಿದ ಸಿಟಿ ರವಿ, ಅಂದು ಪರಿಷತ್​ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ಇಂಚಿಂಚು ಮಾಹಿತಿ ನೀಡಿ ಬಂದಿದ್ದಾರೆ ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರಿಗೆ 8 ಪುಟಗಳ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ & ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಡಿ.19ರಂದು ಇಡೀ ರಾತ್ರಿ ನಡೆದ ಪೊಲೀಸರ ಅಮಾನವೀಯ ವರ್ತನೆ ಮಾಡಿದ್ದಾರೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್​, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.

ದೂರಿನಲ್ಲಿ ಫೇಕ್ ಎನ್‌ ಕೌಂಟರ್ ವಿಚಾರ ಪ್ರಸ್ತಾಪಿಸಿರುವ ಸಿ.ಟಿ.ರವಿ, ಡಿಕೆ ಶಿವಕುಮಾರ್​ ಸೂಚನೆ ಮೇರೆಗೆ ಪೊಲೀಸರು ಸುಪಾರಿ ಕಿಲ್ಲರ್ ರೀತಿ ವರ್ತಿಸಿದರು. ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶ ಮಾಡಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬಂಟರಿಂದಲು ಕೂಡ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ.

Click

https://newsnotout.com/2024/12/job-vacancy-at-engineering-collages-of-govt-of-karnataka/
https://newsnotout.com/2024/12/commando-kannada-news-kodagu-ponch-kashmir-d/
https://newsnotout.com/2024/12/dulicate-bith-cirtificate-kannada-news-viral-news-case/
https://newsnotout.com/2024/12/yamuna-river-manmhan-singh-kannada-news-v/
See also  ಅಮೆರಿಕದ ಮಾಜಿ ಅಧ್ಯಕ್ಷನ ಮೇಲೆ ಮತ್ತೆ ಗುಂಡಿನ ದಾಳಿ..! ಹೇಗಿತ್ತು ದಾಳಿಕೋರನನ್ನು ಹಿಡಿದ ರೋಚಕ ಕಾರ್ಯಾಚರಣೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget