ನ್ಯೂಸ್ ನಾಟೌಟ್: ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್ 2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
ನ್ಯಾ.ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು, ಸಂಸತ್ತು ಈ ವಿಚಾರವಾಗಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದರೆ ಕಾಯಿದೆಯಲ್ಲಿ ಬದಲಾವಣೆ ಮಾಡಬಹುದು. ಈ ಸಂಬಂಧ ಸರ್ಕಾರ ಸಂಸತ್ತಿಗೆ ಪತ್ರ ಬರೆಯಬಹುದು ಎಂದು ತಿಳಿಸಿದೆ.
ಪ್ರಕರಣದ ಆರೋಪಿ 21 ವರ್ಷದ ಮಹಿಳೆಯನ್ನು ಕೊಲೆ ಮಾಡಿ ನಂತರ ಮೃತದೇಹದೊಂದಿಗೆ ಸಂಭೋಗ ನಡೆಸಿದ್ದ. ವಿಚಾರಣಾ ನ್ಯಾಯಾಲಯ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಮತ್ತು ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಎರಡೂ ಕೃತ್ಯಗಳಿಗೆ ಶಿಕ್ಷೆ ವಿಧಿಸಿತ್ತು. ಆದರೆ ತೀರ್ಪಿನಲ್ಲಿ ಶವ ಸಂಭೋಗ ಅತ್ಯಾಚಾರ ಅಪರಾಧವಾಗದು ಎಂದು ಕೋರ್ಟ್ ಹೇಳಿತ್ತು.