ಕ್ರೈಂಬೆಂಗಳೂರುವೈರಲ್ ನ್ಯೂಸ್

ಸರ್ಕಾರಿ ಬಸ್ ನಲ್ಲಿ ಟಿಕೆಟ್‌ ಇಲ್ಲದೆ ಪ್ರಯಾಣ..! ಒಂದೇ ತಿಂಗಳಲ್ಲಿ 7 ಲಕ್ಷಕ್ಕೂ ಅಧಿಕ ದಂಡ ವಸೂಲಿ..!

170

ನ್ಯೂಸ್ ನಾಟೌಟ್: ಯಾವುದೇ ಸರ್ಕಾರಿ ಬಸ್‌ಗಳಲ್ಲಿ ನಿಯಮದ ಪ್ರಕಾರ ಟಿಕೆಟ್‌ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ. ಇನ್ನು ಬಿಎಂಟಿಸಿ ಬಸ್‌ಗಳಲ್ಲಿ ಮಾರ್ಚ್‌ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 3,840 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.

ಕಳೆದ ಮಾರ್ಚ್‌ ತಿಂಗಳಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ 17,900 ಟ್ರಿಪ್‌ಗಳನ್ನು ತಪಾಸಣೆ ಮಾಡಲಾಗಿದ್ದು, ಟಿಕೆಟ್‌ ಇಲ್ಲದೆ ಪ್ರಯಾಣ ಮಾಡಿದ್ದ 3,840 ಮಂದಿ ಪತ್ತೆ ಸಿಕ್ಕಿಬಿದ್ದಿದ್ದರು. ಇನ್ನು ಇವರಿಂದ 7,65,090 ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ಮತ್ತೊಂದೆಡೆ ಕರ್ತವ್ಯ ಲೋಪವೆಸಗಿದ ಹಿನ್ಬೆಲೆ ಬಿಎಂಟಿಸಿ ಸಂಸ್ಥೆಯು 1,101 ನಿರ್ವಾಹಕರ ವಿರುದ್ಧವೂ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ. ಇನ್ನು ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣ ಮಾಡಿದ 530 ಪುರುಷ ಪ್ರಯಾಣಿಕರಿಗೆ 53,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

See also  ಪಾಕ್ ಗೆ ಮತ್ತೆರಡು ನದಿಗಳ ನೀರಿನ ಹರಿವನ್ನು ನಿಲ್ಲಿಸಿದ ಭಾರತ..! ಇಂದು(ಮೇ.4) ಮೋದಿಯನ್ನು ಭೇಟಿಯಾದ ವಾಯುಪಡೆ ಮುಖ್ಯಸ್ಥ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget