ಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್

ಕರ್ನಾಟಕದಲ್ಲಿ ಇನ್ನು ಮುಂದೆ ದ್ವೇಷ ಭಾಷಣ ಮಾಡಿದ್ರೆ 3 ವರ್ಷ ಜೈಲು..! ಹೊಸ ಮಸೂದೆ ತರಲು ಸರ್ಕಾರದ ತಯಾರಿ..!

725
Spread the love

ನ್ಯೂಸ್ ನಾಟೌಟ್: ದ್ವೇಷ ಭಾಷಣ ಮಾಡಿ ಸಾಬೀತಾದ್ರೆ ಕರ್ನಾಟಕದಲ್ಲಿ ಇನ್ನು ಮುಂದೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಸೂದೆಯೊಂದನ್ನ ತರಲು ಸಿದ್ಧತೆ ನಡೆಯುತ್ತಿದೆ.

ಬಜೆಟ್ ಅಧಿವೇಶನದಲ್ಲಿ ಬಿಲ್‌ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನ ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡಿದರೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ, ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನ ಬಿಲ್ ನಲ್ಲಿ ತಿಳಿಸಲಾಗಿದೆ. ಈ ಮಸೂದೆ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರ ಆಗುತ್ತಾ..? ಎನ್ನುವುದು ಇನ್ನಷ್ಟೇ ನಿರ್ಧಾರವಾಗಬೇಕಿದೆ.

See also  ಅಬಕಾರಿ ಅಧಿಕಾರಿಗಳ ಲಂಚಕ್ಕೆ ಬೇಸತ್ತು ರಾಜ್ಯಾದ್ಯಂತ ಪ್ರತಿಭಟನೆ..! ಮದ್ಯ ಮಾರಾಟ ಬಂದ್ ​ಗೆ ನಿರ್ಧಾರ..! ರಾಜ್ಯಪಾಲರಿಗೆ ಪತ್ರ..!
  Ad Widget   Ad Widget   Ad Widget   Ad Widget