ನ್ಯೂಸ್ ನಾಟೌಟ್ : ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಾದ್ಯಂತ ಮುಷ್ಕರ ನಡೆಸಲು ಕರೆ ನೀಡಿದ್ದರು. ಇದೀಗ ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಕರ್ನಾಟಕ ಹೈಕೋರ್ಟ್ ಸಾರಿಗೆ ನೌಕರರಿಗೆ ಆದೇಶಿಸಿದೆ.
ನಾಳಿನ ಮುಷ್ಕರ ಸಂಬಂಧ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ಮುಷ್ಕರ ನಡೆಸದಂತೆ ಆದೇಶಿಸಿದ್ದು, ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಮುಷ್ಕರ ನಡೆದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ ಎಂದು ಹೇಳಿರುವ ಹೈಕೋರ್ಟ್ ಸರ್ಕಾರ, ಸಾರಿಗೆ ನಿಗಮಗಳಿಗೆ ಹೈಕೋರ್ಟ್ ನೋಟಿಸ್ ನೀಡಿದೆ.