ಕ್ರೈಂಬೆಂಗಳೂರುವೈರಲ್ ನ್ಯೂಸ್

ಕರ್ನಾಟಕ ಹೈಕೋರ್ಟ್ ನೊಳಗೆ ಕತ್ತು ಕೊಯ್ದುಕೊಂಡ ವ್ಯಕ್ತಿ ..! ಕಾರಣ ನಿಗೂಢ..!

ನ್ಯೂಸ್ ನಾಟೌಟ್: ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಬುಧವಾರ(ಎ.3) ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕೋರ್ಟ್ ಸಿಬ್ಬಂದಿಗೆ ಅರ್ಜಿ ನೀಡಿ ಆತ್ಮಹತ್ಯೆಗೆ ಯತ್ನಿಸಲಾಗಿದೆ. ಹೈಕೋರ್ಟ್ ಜಡ್ಜ್ ಮುಂದೆಯೇ ಕೃತ್ಯ ನಡೆದಿದ್ದು, ವ್ಯಕ್ತಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್ ಸಂಖ್ಯೆ 1ರಲ್ಲಿ ಬುಧವಾರ ಮಧ್ಯಾಹ್ನ ವ್ಯಕ್ತಿಯೊಬ್ಬರು ಬ್ಲೇಡ್ ನಿಂದ ತಮ್ಮ ಕತ್ತು ಕೊಯ್ದುಕೊಂಡ ಘಟನೆ ನಡೆದಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು. ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು. ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲೇಡ್‌ನಂತಹ ಆಯುಧದಿಂದ ತಮ್ಮ ಕತ್ತು ಕೊಯ್ದುಕೊಂಡರು.

ತಕ್ಷಣವೇ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದರು.

Related posts

ಕೊಡಗು: ಕಾಲು ಜಾರಿ ಬಿದ್ದು ಎನ್.ಸಿ.ಸಿ ಅಧಿಕಾರಿ ಸಾವು!

ವೈದ್ಯರಿಗೆ ಮನಬಂದಂತೆ ಇರಿದ ರೋಗಿಯ ಪುತ್ರ..! ಕ್ಯಾನ್ಸರ್ ಚಿಕಿತ್ಸೆಗಾಗಿ ದಾಖಲಾಗಿದ್ದ ಆರೋಪಿಯ ತಾಯಿ..! ಇಲ್ಲಿದೆ ವಿಡಿಯೋ

ಕೊಯನಾಡು: ಕುಟುಂಬ ಸಹಿತ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಚರಂಡಿಗೆ, ಮಕ್ಕಳು ಸೇರಿದಂತೆ ಐವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು