Latestಕ್ರೈಂರಾಜ್ಯ

ಮಹಾರಾಷ್ಟ್ರ-ಕರ್ನಾಟಕ ನಡುವೆ ಎರಡೂ ಕಡೆಯ ಬಸ್​ ಸೇವೆ ಸ್ಥಗಿತ..! ಬೆಳಗಾವಿ ಗಡಿ ಮತ್ತೆ ಉದ್ವಿಗ್ನ..!

299
Spread the love

ನ್ಯೂಸ್ ನಾಟೌಟ್: ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದರು ಎನ್ನುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಸಹ ಕೆಲ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಕನ್ನಡಿಗರು ಸಿಡಿದೆದಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಜಾಗ್ರತಾವಾಗಿ ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸಂಚಾರ ಸ್ಥಗಿತ ಮಾಡಲಾಗಿದೆ.

ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ ಬಸ್ ಸಂಚಾರವೂ ಸ್ಥಗಿತಗೊಳಿಸಲಾಗಿದೆ. ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುವ ಎಲ್ಲಾ KSRTC ಬಸ್​ಗಳ ಸಂಚಾರ ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್​ಗಳ ಸಂಚಾರ ನಡೆಸುತ್ತಿದ್ದು, ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಹೋಗುತ್ತಿದ್ದವರ ಮೇಲೆ ಹರಿದ ಬಸ್..! ಇಬ್ಬರು ಸ್ಥಳದಲ್ಲೇ ಸಾವು..!

ಇನ್ನೊಂದೆಡೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸಂಚರಿಸುವ ಎಲ್ಲಾ ಬಸ್ ಸಹ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ MSRTC ಬಸ್ ಮೇಲೆ ಶುಕ್ರವಾರ ರಾತ್ರಿ 9.10ರ ಸುಮಾರಿಗೆ ಚಿತ್ರದುರ್ಗದಲ್ಲಿ ಕನ್ನಡಪರ ಕಾರ್ಯಕರ್ತರು ದಾಳಿ ಮಾಡಿದ್ದರು. ಕಾರ್ಯಕರ್ತರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೂ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸದ ಹೊರತು ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಪುನರಾರಂಭಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಆದೇಶಿಸಿದ್ದಾರೆ.

See also  ಸುಳ್ಯ: ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆಗೆ ಬಿಗ್ ಟ್ವಿಸ್ಟ್, ಸಿಸಿ ಕ್ಯಾಮೆರಾ ಕೊಟ್ಟಿದೆ ಮಹತ್ವದ ಸುಳಿವು
  Ad Widget   Ad Widget   Ad Widget   Ad Widget