Latestಜೀವನಶೈಲಿ

ಇನ್ಮುಂದೆ ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ : ‘ರಾಗಿ ಹೆಲ್ತ್ ಮಿಕ್ಸ್’ ನೀಡಲು ಸರ್ಕಾರದ ಚಿಂತನೆ

456

ನ್ಯೂಸ್‌ ನಾಟೌಟ್: ಅಂಗನವಾಡಿ ಮಕ್ಕಳಿಗೆ ಅಗತ್ಯ ಪೌಷ್ಟಿಕಾಂಶ ಒದಗಿಸಲು ಚಿಂತನೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ ಸಹಯೋಗದೊಂದಿಗೆ ರಾಗಿ ಹೆಲ್ತ್ ಮಿಕ್ಸ್ ನೀಡಲು ಯೋಜಿಸುತ್ತಿದೆ.

ಸದ್ಯ ಸರ್ಕಾರಿ ಶಾಲೆಗಳಿಗೆ ಪೌಷ್ಟಿಕಾಂಶ ಭರಿತ ಮಿಶ್ರಣವನ್ನು ಪೂರೈಸಲು ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸಿದ್ದು, ತೀವ್ರ ಅಪೌಷ್ಟಿಕತೆ ಮತ್ತು ಮಧ್ಯಮ ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಮೇಲೆ ವಿಶೇಷ ಗಮನಹರಿಸುತ್ತಿದೆ.ಈ ಮೂಲಕ ಈ ಕಾರ್ಯಕ್ರಮವನ್ನು ಅಂಗನವಾಡಿ ಮಕ್ಕಳಿಗೆ ವಿಸ್ತರಿಸುವ ಯೋಜನೆ ಈಗ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ ವೇಳೆಗೆ ಕಾರ್ಯಕ್ರಮ ಆರಂಭವಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಯಾದಗಿರಿ, ಚಾಮರಾಜನಗರ, ಬಾಗಲಕೋಟೆ, ಹಾವೇರಿ ಮತ್ತು ಧಾರವಾಡದಂತಹ ಜಿಲ್ಲೆಗಳಾದ್ಯಂತ ಸುಮಾರು 4,000 ಮಕ್ಕಳಿಗೆ ಮೊಟ್ಟ ಮೊದಲಿಗೆ ಈ ಹೆಲ್ತ್ ಮಿಕ್ಸ್ ನೀಡುವ ಯೋಜನೆಯಿದ್ದು, ಬಳಿಕ ಒಂದು ವರ್ಷದಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿಯೂ ಕಾರ್ಯಕ್ರಮವನ್ನು ವಿಸ್ತರಿಸಲು ಇಲಾಖೆ ಯೋಜಿಸುತ್ತಿದೆ. ಈ ವಿಸ್ತರಣೆಯು ರಾಜ್ಯದಾದ್ಯಂತ ಪೌಷ್ಠಿಕಾಂಶದ ಬೆಂಬಲದ ವ್ಯಾಪ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಮಿಶ್ರಣವು ಅಗತ್ಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ.ಇದನ್ನು ಒಂದು ಲೋಟ ಹಾಲಿನೊಂದಿಗೆ ಬೆರೆಸಿ ಸೇವಿಸಬೇಕಾಗಿದೆ. ಸರ್ಕಾರವು ಈಗಾಗಲೇ ಹಾಲು ನೀಡುತ್ತಿರುವುದರಿಂದ, ಇದು ಸರ್ಕಾರದ ಯೋಜನೆಗಳಿಗೆ ಪೂರಕವಾಗಿದೆ, ಮಕ್ಕಳ ಬೆಳವಣಿಗೆಗೆ ಅಗತ್ಯವಾದ ಪ್ರಮುಖ ಪೋಷಕಾಂಶಗಳನ್ನು ಪಡೆಯಬಹುದಾಗಿದೆ ಎಂದು ವಿವರಿಸಿದರು.

 

See also  ಜೆಡಿಎಸ್‌ ಶಾಸಕಿಗೆ ಕಾಂಗ್ರೆಸ್ ಗೆ ಬರುವಂತೆ ವೇದಿಕೆ ಮೇಲೆ ಓಪನ್ ಆಫರ್ ನೀಡಿದ ಶಿಕ್ಷಣ ಸಚಿವ..! ಡ್ಯಾಂಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಾಜಕೀಯ ಬೆಳವಣಿಗೆ..!
  Ad Widget   Ad Widget   Ad Widget   Ad Widget