Uncategorized

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿಯ ಅಬ್ಬರ, ದಕ್ಷಿಣ ಕನ್ನಡ, ಕೊಡಗಿನಲ್ಲಿ ಹೇಗಿದೆ ಚಳಿ?

ನ್ಯೂಸ್ ನಾಟೌಟ್: ದೇಶದ ವಿವಿಧ ರಾಜ್ಯಗಳಲ್ಲಿ ನಿಧಾನವಾಗಿ ಚಳಿ ಏರುತ್ತಿದೆ. ಅಂತೆಯೇ ರಾಜ್ಯದಲ್ಲೂ ಚಳಿ ಕಾಟ ಕಳೆದ ಕೆಲ ದಿನಗಳಿಂದ ಹೆಚ್ಚಾಗಿದೆ.  ಬಹುತೇಕ ಕಡೆ ಕನಿಷ್ಠ ಉಷ್ಣಾಂಶ ಕೂಡ ಗಮನಾರ್ಹವಾಗಿ ಇಳಿಕೆ ಕಂಡಿದೆ. ಸಿಲಿಕಾನ್ ಸಿಟಿಯಲ್ಲೂ ಕೂಡ ಈ ಬಾರಿ ಚಳಿಯ ಎಫೆಕ್ಟ್ ತಟ್ಟಿದ್ದು, ಬೆಳ್ಳಂಬೆಳಗ್ಗೆ ಜನ ಆಚೆ ಬರಲು ಯೋಚನೆ ಮಾಡುವಂತ ಪರಿಸ್ಥಿತಿ ನಿರ್ಮಾಣ ಆಗಿದೆ. ಬೆಳ್ಳಂಬೆಳಗ್ಗೆ ಚಳಿ ಜೊತೆಗೆ ಮಂಜು ಕೂಡ ದಟ್ಟವಾಗುತ್ತಿದ್ದು, ಕೆಲವೊಮ್ಮೆ ಸಂಜೆ ವೇಳೆಯೂ ಮಂಜಿನ ಎಫೆಕ್ಟ್ ಜನರಿಗೆ ಜೋರಾಗಿಯೇ ತಟ್ಟುತ್ತಿದೆ.

ಬೆಂಗಳೂರಿನಲ್ಲಿಂದು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 13 ಡಿಗ್ರಿ ಸೆಲ್ಸಿಯಸ್‍ಗೆ ಇಳಿಯಲಿದೆ. ಬೀದರ್‌ನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್‍ಗೆ ಇಳಿಯಲಿದೆ. ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ   21 ಡಿಗ್ರಿ ಸೆಲ್ಸಿಯಸ್ ಆಗಿದೆ. ಉಳಿದಂತೆ ಮಡಿಕೇರಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್‍ಗೆ ಇಳಿಯಲಿದೆ

Related posts

ಬಜರಂಗ ದಳ ಬ್ಯಾನ್‌ ಬಿಸಿ: ಇಂದು ಸಂಜೆ ರಾಜ್ಯಾದ್ಯಂತ ಮೊಳಗಲಿದೆ ಹನುಮಾನ್ ಚಾಲೀಸಾ

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ, ಹಿಂದೂ ಸಂಘಟನೆಯ ಮುಖ್ಯಸ್ಥ ಅರೆಸ್ಟ್..!

ಕಾಡಾನೆ ಸೆರೆಯಾದ ನಂತರ ಸ್ಥಳದಲ್ಲಿ ವಾಗ್ವಾದ,ಅಧಿಕಾರಿಗಳಿಗೆ ಹಲ್ಲೆ: ಓರ್ವ ವಶಕ್ಕೆ