ದೇಶ-ಪ್ರಪಂಚ

‘ಪರೇಡ್’ನಲ್ಲಿ ದೇಶದ ಗಮನ ಸೆಳೆದ ಕರ್ನಾಟಕದ ಸ್ತಬ್ದಚಿತ್ರ,14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ

ನ್ಯೂಸ್ ನಾಟೌಟ್ : ಕನ್ನಡಿಗರು ಹೆಮ್ಮೆ ಪಡಬೇಕಾದ ವಿಚಾರ. 74ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನಸೆಳೆದಿದೆ. ಸತತ 14 ವರ್ಷಗಳಿಂದ ಪಥಸಂಚಲನದಲ್ಲಿ ಪಾಲ್ಗೊಂಡ ದೇಶದ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೂ  ಕರ್ನಾಟಕ ಪಾತ್ರವಾಗಿದೆ.

ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರ:
    
ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಗಿತ್ತು.ಇಲ್ಲಿ ಪದ್ಮಶ್ರೀ ಪುರಸ್ಕೃತರಾದ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಮತ್ತು ಸಾಲು ಮರದ ತಿಮ್ಮಕ್ಕ ಅವರ ಸಾಧನೆಗಳ ಅನಾವರಣಗೊಳಿಸಲಾಯಿತು. ಗಿಡ-ಮರ ,ಬೆಟ್ಟ-ಗುಡ್ಡಗಳಿಂದ ಸ್ತಬ್ಧಚಿತ್ರ ಶೃಂಗಾರಗೊಂಡಿತ್ತು.ಹೆರಿಗೆ ತಜ್ಞೆ ಸೂಲಗಿತ್ತಿ ನರಸಮ್ಮ, ಚನ್ನಪಟ್ಟಣದ ಗೊಂಬೆ ಮಾದರಿಯ ತೊಟ್ಟಿಲು ಮತ್ತು ನರಸಮ್ಮನವರು ಮಗುವನ್ನು ಎತ್ತಿಕೊಂಡಿರುವಂತಹ ಚಿತ್ರ ಪ್ರದರ್ಶನಗೊಂಡಿತು.

ಹೆರಿಗೆ ತಜ್ಞೆ- ಸೂಲಗಿತ್ತಿ ನರಸಮ್ಮ, ಹಾಲಕ್ಕಿ ಸಮುದಾಯದ ವೃಕ್ಷ ಮಾತೆ- ತುಳಸಿ ಗೌಡ, ಪರಿಸರ ಪ್ರೇಮಿ- ಸಾಲುಮರದ ತಿಮ್ಮಕ್ಕ ಮೂವರು ಸಮಾಜಕ್ಕೆ ನಿಸ್ವಾರ್ಥ ಕೊಡುಗೆ ನೀಡಿ ಹೆಸರುವಾಸಿಯಾಗಿದ್ದಾರೆ.ಹೀಗಾಗಿ ಇವರ ಸ್ತಬ್ಧ ಚಿತ್ರಗಳು ಕೂಡ ಸಹಜವಾಗಿಯೇ ಎಲ್ಲರ ಆಕರ್ಷಣೆಗೆ ಪಾತ್ರವಾಯಿತು.

Related posts

ಬಿಯರ್‌ ಸೇವಿಸಿ ಇಬ್ಬರು ಕಾನ್‌ ಸ್ಟೆಬಲ್‌ಗಳ ದುರಂತ ಅಂತ್ಯ..? ರಾತ್ರೋರಾತ್ರಿ ಇಬ್ಬರಿಗೂ ವಾಂತಿ-ಭೇದಿ..!

ತಮಿಳರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಶೋಭಾ ಕರಂದ್ಲಾಜೆ..! ಏನಿದು ವಿವಾದ..? ಸಚಿವೆ ಕ್ಷಮೆ ಕೇಳಿದ್ದೇಕೆ..?

ಉಗ್ರರಿಗೆ ಬೆಂಬಲ ನೀಡಿದ್ದೇಕೆ ಆ ಇಬ್ಬರು ಮಹಿಳೆಯರು? ಓರ್ವ ಅಪ್ರಾಪ್ತ ಸೇರಿ ಆರು ಮಂದಿ ಅರೆಸ್ಟ್!