ಕರಾವಳಿಕೊಡಗುಬೆಂಗಳೂರುರಾಜಕೀಯಸುಳ್ಯ

ಭರ್ಜರಿ ಗೆಲುವಿಗೆ ಸಿಹಿ ಹಂಚಿ ಸಂಭ್ರಮಿಸಿದ ಖರ್ಗೆ

217

ನ್ಯೂಸ್‌ ನಾಟೌಟ್‌: ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತಿದ್ದಂತೆ, ಕೈ ನಾಯಕರ ಖುಷಿ ಇಮ್ಮಡಿಯಾಗಿದೆ. ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿಕೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆ.ಸಿ.ವೇಣುಗೋಪಾಲ್ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.

ಕರ್ನಾಟಕದಲ್ಲಿ ಜನತೆ ಆಶೀರ್ವಾದ ಮಾಡಿರುವುದನ್ನು ಗೆಲುವು ಜನತಾ ಜನಾರ್ಧನನ ಗೆಲುವು ಎಂದು ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಕೆಟ್ಟ ಆಡಳಿತದ ವಿರುದ್ಧ ಜನರು ಮತ ಚಲಾಯಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಇಂದು ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸುವಂತೆ ತಿಳಿಸಲಾಗಿದೆ. ಶಾಸಕರೊಂದಿಗಿನ ಸಭೆಯ ಬಳಿಕ ಹೈಕಮಾಂಡ್ ವೀಕ್ಷಕರನ್ನು ಕಳುಹಿಸುತ್ತದೆ. ನಂತರ ಸರ್ಕಾರ ರಚನೆಗೆ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

See also  ಪುತ್ತೂರಿನಲ್ಲಿ ಬಿಜೆಪಿ ಮುಖಂಡರ‌ ಭಾವಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ! ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಬೆ ಕೂರಿಸುವ ಯತ್ನ: ಶಾಸಕ ಅಶೋಕ್ ರೈ ಆರೋಪ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget