ಕರಾವಳಿಕಾಸರಗೋಡುಕ್ರೈಂ

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು..! ವೈದ್ಯರು ತಪಾಸಣೆ ನಡೆಸಿ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದಿದ್ದರು..!

232

ನ್ಯೂಸ್ ನಾಟೌಟ್ : ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಯಲ್ಲಿ ಇಂದು(ಜ.12) ನಡೆದಿದೆ.
ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು.

ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಮತ್ತೆ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.
ಊರಿಗೆ ಬಂದಿದ್ದ ಮಗುವಿನ ತಂದೆ ಅನ್ವರ್ ಒಂದು ವಾರದ ಹಿಂದೆಯಷ್ಟೇ ಗಲ್ಫ್ ಗೆ ತೆರಳಿದ್ದರು. ಸುದ್ದಿ ತಿಳಿದು ತಂದೆ ಊರಿಗೆ ಮರಳಿದ್ದಾರೆ ಎನ್ನಲಾಗಿದೆ.

Click

https://newsnotout.com/2025/01/mother-2-child-and-got-love-with-young-man-and-nomore-s/
https://newsnotout.com/2025/01/mall-and-money-viral-video-kannada-news-video-d/
https://newsnotout.com/2025/01/mangaluru-kambala-inaguaration-ullala-mangaluru-v-news/
https://newsnotout.com/2025/01/rishab-shetty-kannada-news-anjaneya-swami-film-issue-kannada-news-cinema/
https://newsnotout.com/2025/01/kambala-ct-ravi-kannada-news-15-days-deadline-viral-latter/
https://newsnotout.com/2025/01/baby-found-in-dust-bin-kannada-news-public-and-police-rescue/
https://newsnotout.com/2025/01/rashmika-mandanna-gym-kannada-news-actress/
See also  ಮುಸ್ಲಿಂ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget