Latestಕಾಸರಗೋಡುಕ್ರೈಂ

ಕಾಸರಗೋಡು: ವಾಟ್ಸ್‌ ಆ್ಯಪ್ ಮೂಲಕ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ವಿರುದ್ಧ ಎಫ್.ಐ.ಆರ್..! ಗಲ್ಫ್‌ ನಲ್ಲಿ ಕೆಲಸ ಮಾಡುತ್ತಿರುವ ರಜಾಕ್ ವಿರುದ್ಧ ದೂರು ದಾಖಲು..!

572

ನ್ಯೂಸ್‌ ನಾಟೌಟ್ : ಪತ್ನಿಗೆ ವಿಚ್ಛೇದನ ನೀಡಲು ವಾಟ್ಸ್‌ ಆ್ಯಪ್ ಮೂಲಕ ತ್ರಿವಳಿ ತಲಾಖ್ ಘೋಷಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಭಾನುವಾರ(ಮಾ.02) ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು ಸಮೀಪದ ನೆಲ್ಲಿಕಟ್ಟೆ ಮೂಲದ ಅಬ್ದುಲ್ ರಜಾಕ್ ಎಂಬಾತನ ವಿರುದ್ಧ ಹೊಸದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೆಬ್ರವರಿ 21ರಂದು ವಾಟ್ಸಾಪ್ ವಾಯ್ಸ್ ಮೆಸೇಜ್ ಮೂಲಕ ಪತಿ ವಿಚ್ಛೇದನ ನೀಡಿದ್ದಾರೆ ಎಂದು ಆರೋಪಿಸಿ ಕಲ್ಲೂರವಿಯ 21 ವರ್ಷದ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಗಲ್ಫ್‌ ನಲ್ಲಿ ಕೆಲಸ ಮಾಡುತ್ತಿರುವ ರಜಾಕ್ ಯುಎಇಯಿಂದ ಮಹಿಳೆಯ ತಂದೆಯ ವಾಟ್ಸಾಪ್ ಸಂಖ್ಯೆಗೆ ತಲಾಖ್ ಸಂದೇಶವನ್ನು ಕಳುಹಿಸಿದ್ದಾರೆ. ರಜಾಕ್ ₹12 ಲಕ್ಷ ವಂಚಿಸಿದ್ದಾರೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ ಮತ್ತು ಆತ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಮಹಿಳೆಯ ಕುಟುಂಬದ ದೂರಿನ ಮೇರೆಗೆ, ಪೊಲೀಸರು ಭಾನುವಾರ ರಜಾಕ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 351 (4) ಅಡಿಯಲ್ಲಿ ಕ್ರಿಮಿನಲ್ ಬೆದರಿಕೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

See also  ಕೇರಳ: ಮಹಿಳೆಯ ನಗ್ನ ವಿಡಿಯೋ ರೆಕಾರ್ಡ್‌ ಮಾಡಿ ಬೆದರಿಕೆ ಆರೋಪ..! ಪ್ರತಿಷ್ಠಿತ ದೇವಸ್ಥಾನದ ಅರ್ಚಕನ ಬಂಧನ..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget