ಕಾಸರಗೋಡುಕ್ರೈಂ

ಕಾಸರಗೋಡು: ಬೈಕ್ ಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್..! ಖಾಸಗಿ ಬಸ್ ನಡಿಗೆ ಎಸೆಯಲ್ಪಟ್ಟು ಸಾಫ್ಟ್ ವೇರ್ ಇಂಜಿನಿಯರ್ ಸಾವು..!

226

ನ್ಯೂಸ್ ನಾಟೌಟ್: ಕೆ.ಎಸ್.ಆರ್.ಟಿ.ಸಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆ.25ರ ರಾತ್ರಿ ಕಾಸರಗೋಡಿನ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ನಲ್ಲಿ ನಡೆದಿದೆ.

ಪಡನ್ನ ಕ್ಕಾಡ್ ಮೇಲ್ಸೇತುವೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾಞಂಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿ ನಿಂದ ಬೇಡಡ್ಕಕ್ಕೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೃತರನ್ನು ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ.
ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಸುಳ್ಯ ಶೂಟೌಟ್ ಪ್ರಕರಣದ ಹಂತಕರು ಬಲೆಗೆ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget