ನ್ಯೂಸ್ ನಾಟೌಟ್ : ಮಹಿಳೆಯೊಂದಿಗೆ ವೈದ್ಯರೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ. ಆ ನಂತರ ತಲೆಮರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನುವ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಸಲಿಗೆ ವೈದ್ಯ ಅಮಾಯಕನಾಗಿದ್ದು ಅವರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಎನ್ನಲಾಗಿದೆ.
ಹಾಗಿದ್ದರೆ ಸತ್ಯ ಯಾವುದು?
ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಹಾಗೂ ಸಮಾಜದಲ್ಲಿ ಉತ್ತಮ ಕೆಲಸ ಮಾಡಿಕೊಂಡು ಬರುವ ಕೆಲವು ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿಕೊಂಡು ಅವರನ್ನು ಮಾನಸಿಕವಾಗಿ ಹಿಂಸಿಸುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಇದೀಗ ಕಾಸರಗೋಡಿನ ಬದಿಯಡ್ಕದಲ್ಲಿ ಜನ ಗುಸುಗುಸು ಮಾತನಾಡಿಕೊಳ್ಳುತ್ತಿದ್ದಾರೆ. ಖ್ಯಾತ ವೈದ್ಯರ ಹೆಸರು ಕೆಡಿಸಿ ಅದರಿಂದ ಬೇಳೆ ಬೇಯಿಸಿಕೊಳ್ಳುವುದಕ್ಕೆ ಕೆಲವರು ಸಮಾಜ ಘಾತುಕ ಶಕ್ತಿಗಳು ಪ್ರಯತ್ನಿಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಒಟ್ಟಿನಲ್ಲಿ ಡಾ ಕೃಷ್ಣಮೂರ್ತಿಯವರು ಇದೀಗ ಶವವಾಗಿ ಪತ್ತೆಯಾಗಿದ್ದು ಯಾವ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನುವ ವಿಚಾರ ಭಾರಿ ಕುತೂಹಲಕ್ಕೆ ಕಾರಣವಾಗಿದೆ.