ಕಾಸರಗೋಡು: ಪರೀಕ್ಷೆ ಬರೆದು ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಆದಿಲ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಕಾಸರಗೋಡಿನಲ್ಲಿ ಸಂಭವಿಸಿದೆ.
ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.
previous post