ಕರಾವಳಿಕ್ರೈಂ

ಕಟೀಲು ದೇವಸ್ಥಾನದ ಎದುರು ಬೆಂಕಿಗಾಹುತಿಯಾದ ಬಸ್ಸ್! ಸ್ಪಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ!

313

ನ್ಯೂಸ್ ನಾಟೌಟ್ :  ಕಟೀಲು ದೇವಸ್ಥಾನದ ಮುಂದೆ ಎಂಆರ್‌ಪಿಎಲ್ ಕಂಪನಿಗೆ ಸೇರಿದ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಪವಾಡ ಸದೃಶ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ  ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ ಎನ್ನಲಾಗಿದ್ದು, ಕಟೀಲು ರೂಟ್‌ನಲ್ಲಿ ಚಲಿಸುವ ಬಸ್, ಕಟೀಲು ಕಡೆಯ ನೌಕರನ್ನು ಬಿಟ್ಟು ವಾಪಸ್ಸಾಗುವ ಸಂದರ್ಭ ಘಟನೆ ಸಂಭವಿಸಿದೆ.

ಕೂಡಲೇ ಸ್ಥಳೀಯವಾಗಿ ನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ  ಟ್ಯಾಂಕರ್ ಮೂಲಕ  ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ. ಬಸ್ಸಿನಲ್ಲಿ ಡ್ರೈವರ್ ಸೇರಿ ಮೂರು ಜನ ಇದ್ದಾರೆಂದು ತಿಳಿದು ಬಂದಿದ್ದು ,ಬೆಂಕಿ ತಗಲಿದ ಕೂಡಲೇ ಬಸ್ಸಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರು ಬಸ್ಸಿನಿಂದ ಜಿಗಿದು ಪಾರಾಗಿದ್ದಾರೆ.

See also  ಪೆರಾಜೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವಿಗೆ ತಂತ್ರ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget