ಕರಾವಳಿವೈರಲ್ ನ್ಯೂಸ್ಸಿನಿಮಾ

ಮಂಗಳೂರು: ಕಟೀಲು ಶ್ರೀದುರ್ಗಾಪರಮೇಶ್ವರಿಯ ದರ್ಶನ ಪಡೆದ ನಟ ಶ್ರೀಮುರಳಿ, ಕರಾವಳಿಯ ನಟರು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ ಎಂದ ನಟ

249

ನ್ಯೂಸ್ ನಾಟೌಟ್: ಸ್ಯಾಂಡಲ್‌ವುಡ್ ನಟ ಶ್ರೀಮುರಳಿ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಇಂದು (ಅ.8) ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಶ್ರೀಮುರಳಿ ವಿಶೇಷ ಪೂಜೆ ಸಲ್ಲಿಸಿದರು. ಆ ನಂತರ ಕ್ಷೇತ್ರದ ವತಿಯಿಂದ ಶ್ರೀಮುರಳಿಗೆ ದೇವರ ವಿಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.

ನವರಾತ್ರಿ ಶುಭ ಸಂದರ್ಭದಲ್ಲಿ ಕರಾವಳಿಯ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದೇನೆ. ನಾನು ಬಾಲ್ಯದಲ್ಲಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಇದೀಗ ಮತ್ತೆ ಇಲ್ಲಿಗೆ ಬರುವ ಅವಕಾಶ ಸಿಕ್ಕಿದೆ. ಸದ್ಯದಲ್ಲೇ ನಾನು ನಟಿಸಿರುವ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.

ಕರಾವಳಿಯ ನಟರು ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಈ ಬಗ್ಗೆ ಖುಷಿಯಿದೆ, ತುಳು ಚಿತ್ರರಂಗ ಬೆಳೆಯುತ್ತಿದೆ. ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಕನ್ನಡ ಚಿತ್ರರಂಗದಂತೆ ತುಳು ಚಿತ್ರರಂಗವು ಮುಂದುವರಿಯಬೇಕು ಎಂದು ಶ್ರೀಮುರಳಿ ಹಾರೈಸಿದ್ದಾರೆ.

See also  ಕೆವಿಜಿ ವೈದ್ಯಕೀಯ ಕಾಲೇಜಿನಲ್ಲಿ 'ಮಣ್ಣು ಉಳಿಸಿ' ಅಭಿಯಾನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget