ಕರಾವಳಿ

ಕರಾವಳಿಯ ಹುಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಗೆ ಅದ್ದೂರಿ ಸ್ವಾಗತ

480

ನ್ಯೂಸ್ ನಾಟೌಟ್: ವೀರ ಸೇನಾನಿ, ಬ್ರಿಟಿಷರ ವಿರುದ್ಧ ಹೋರಾಡಿದ ಕರಾವಳಿಯ ಹುಲಿ ಕೆದಂಬಾಡಿ ರಾಮಯ್ಯಗೌಡರವರ ಕಂಚಿನ ಪ್ರತಿಮೆ ಸುಳ್ಯಕ್ಕೆ ಆಗಮಿಸುವುದಕ್ಕೆ ಇನ್ನೇನು ಕ್ಷಣಗಣನೆ ಶುರುವಾಗಿದೆ.

ಜಾತಿ ಮತ ಧರ್ಮ ಮೀರಿ ಕಂಚಿನ ಪ್ರತಿಮೆಯ ಸ್ವಾಗತಕ್ಕೆ ಕೊಡಗು –ದಕ್ಷಿಣ ಕನ್ನಡ ಭಾಗದ ಜನತೆ ಸರ್ವ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ನಡುವೆ ಭಾನುವಾರ ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಗುರುಭವನದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಪ್ರಸನ್ನನಾಥ ಸ್ವಾಮೀಜಿ, ಧರ್ಮಪಾಲನಾಥ ಸ್ವಾಮೀಜಿ, ನಾಗಮಂಗಲ ಶಾಸಕ ಸುರೇಶ್ ಗೌಡ, ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ರೇಣುಕಾ ಪ್ರಸಾದ್, ದಕ್ಷಿಣ ಕನ್ನಡ ಜಿಲ್ಲಾ ಯುವ ಒಕ್ಕಲಿಗರ ಸಂಘದ ಅಧ್ಯಕ್ಷ ಅಕ್ಷಯ್ ಕೆ. ಸಿ, ಸ್ವತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉತ್ಸವ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

See also  ಪುತ್ತೂರು: ಗೃಹಪ್ರವೇಶ ಮುಗಿಸಿ ಎರಡೇ ದಿನಕ್ಕೆ ಯಜಮಾನ ನೇಣಿಗೆ ಶರಣು! ಪತ್ನಿಯೊಂದಿಗಿನ ಗಲಾಟೆ ಸಾವಿನಲ್ಲಿ ಅಂತ್ಯ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget