ಕರಾವಳಿಕಾಸರಗೋಡುಕ್ರೈಂರಾಜಕೀಯರಾಜ್ಯ

ಕೇರಳ ಸಿಎಂ ಪಿಣರಾಯಿ ವಿಜಯನ್‌ ಗೆ ಸಿದ್ದರಾಮಯ್ಯ ಫೋನ್ ಕರೆ ಮಾಡಿ ನೆರವಿನ ಭರವಸೆ..! ಕರ್ನಾಟಕದಿಂದ ಸಹಾಯವಾಣಿ ಆರಂಭ

222

ನ್ಯೂಸ್ ನಾಟೌಟ್: ಕೇರಳದ ವಯನಾಡ್‌ನಲ್ಲಿ ನಡೆದ ಭೂಕುಸಿತ ದುರಂತದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕೇರಳದ ಮುಖ್ಯಮಂತ್ರಿ ಪಿಣರಾಯ್ ಪಿಜಯನ್ ಜೊತೆಗೆ ಫೋನ್‌ ಮೂಲಕ ಮಾತನಾಡಿದ್ದಾರೆ.

ಈ ಸಂದರ್ಭದಲ್ಲಿ ಅಗತ್ಯ ನೆರವಿನ ಭರವಸೆಯನ್ನು ನೀಡಿದ್ದಾರೆ. ದೂರವಾಣಿ ಮೂಲಕ ಪಿಣರಾಯಿ ವಿಜಯನ್ ಜೊತೆ ಮಾತನಾಡಿದ ಸಿದ್ದರಾಮಯ್ಯ ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ತಿಳಿಸಿದ್ದಾರೆ. ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ,ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ. ಅಲ್ಲದೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಾಗೂ ಸುತ್ತಲಿನ ಪ್ರದೇಶಗಳ ಅಸಂಘಟಿತ ಕಾರ್ಮಿಕರು ಅಲ್ಲಿಗೆ ನಿಯಮಿತವಾಗಿ ಕೆಲಸಕ್ಕಾಗಿ ತೆರಳಿರುವ ಸಾಧ್ಯತೆ ಇರುವುದರಿಂದ ಅಂತಹವರು ಕಣ್ಮರೆಯಾಗಿದ್ದಾರೆ ಅವರು ಸಂಬಂಧಿಕರು,ಪರಿಚಿತರು ಮಾಹಿತಿ ನೀಡಲು ಚಾಮರಾಜನಗರ ಜಿಲ್ಲಾಡಳಿತವು 24/7 ಸಹಾಯವಾಣಿ ಸ್ಥಾಪಿಸಿದೆ.ಸಹಾಯವಾಣಿ ಸಂಖ್ಯೆಗಳು-08226-223161,223163,223160 ಅಥವಾ ವಾಟ್ಸಪ್ ಸಂಖ್ಯೆ9740942902 ಮೂಲಕ ಸಾರ್ವಜನಿಕರು ಸಂಪರ್ಕಿಸಲು ಕೋರಿದೆ. ಪಾರ್ಥಿವ ಶರೀರಗಳ ಸಂರಕ್ಷಣೆಗೆ ಶೈತ್ಯಾಗಾರದ ಘಟಕಗಳನ್ನು ಒದಗಿಸುವ ಸರಬರಾಜುದಾರನ್ನು ಗುರುತಿಸಲಾಗಿದೆ. ಮೈಸೂರು ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ: 0821-24223800 ಗೆ ಸಂಪರ್ಕ ಮಾಡಬಹುದಾಗಿದೆ.

Click

https://newsnotout.com/2024/07/dakshina-kannada-chikkamagaluru-and-kodagu-under-red-alert/
https://newsnotout.com/2024/07/wayanad-landslide-kannada-news-2-suspence-and-2-nomore-origin-of-karnataka/
https://newsnotout.com/2024/07/ksrtc-bmtc-kannada-news-ticket-20-increase-issue/
See also  ಸುಳ್ಯ: ತಾಲೂಕು ಸಾಹಿತ್ಯ ಸಮ್ಮೇಳನದ ಟೀ ಶರ್ಟ್ ಬಿಡುಗಡೆ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget