ಕರಾವಳಿ

ಕೇರಳ :ವರದಕ್ಷಿಣೆ ಬೇಡಿಕೆ, ಮನನೊಂದು ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

ನ್ಯೂಸ್ ನಾಟೌಟ್ :ವರದಕ್ಷಿಣೆ ಬೇಡಿಕೆಯಿಂದ ಮನನೊಂದು ವೈದ್ಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ತಿರುವನಂತಪುರದಲ್ಲಿಂದ ವರದಿಯಾಗಿದೆ.

ಮೃತ ವಿದ್ಯಾರ್ಥಿನಿಯನ್ನು ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹನಾ(26) ಎಂದು ಗುರುತಿಸಲಾಗಿದೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿಯಾಗಿದ್ದು, ಸಂಸ್ಥೆಯ ಬಳಿಯ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ವಿದ್ಯಾರ್ಥಿನಿ ಗೆಳೆಯನ ಕುಟುಂಬವು ಚಿನ್ನ, ಜಮೀನು ಹಾಗೂ ಬಿಎಂಡಬ್ಲ್ಯು ಕಾರಿನ ರೂಪದಲ್ಲಿ ವರದಕ್ಷಿಣೆ ನೀಡುವಂತೆ ಬೇಡಿಕೆ ಇಟ್ಟಿತ್ತು.ಆದರೆ ಈ ಬೇಡಿಕೆಗಳನ್ನು ಈಡೇರಿಸಲು ಶಹನಾ ಕುಟುಂಬಕ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ವೈದ್ಯ ಈಕೆಯ ಜೊತೆಗಿನ ಸಂಬಂಧವನ್ನು ಕೊನೆಗೊಳಿಸಿದ್ದಾನೆ.ಆತ ಮದುವೆಯ ಪ್ರಸ್ತಾಪದಿಂದ ಹಿಂದೆ ಸರಿದ ನಂತರ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳ ಮಹಿಳಾ ಆಯೋಗದ ಅಧ್ಯಕ್ಷೆ ಅಡ್ವೊಕೇಟ್ ಸತಿದೇವಿಯವರು ಶಹನಾ ಮನೆಗೆ ತೆರಳಿ ತಾಯಿಯನ್ನು ಭೇಟಿ ಮಾಡಿದ್ದು ಈ ವೇಳೆ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ತಾಯಿ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

Related posts

ನಟಿ ಹರಿಪ್ರಿಯಾ-ವಸಿಷ್ಠ ನಿಶ್ಚಿತಾರ್ಥ, ಕೊನೆ ತನಕ ಗುಟ್ಟು ಬಿಟ್ಟು ಕೊಡದ ಜೋಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಗ್ರರ ತರಬೇತಿ ತಾಣ

ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ದೊರೆಸ್ವಾಮಿ ನಿಧನ