ಭಕ್ತಿಭಾವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕೆಜಿಎಫ್ -2 ಸಿನಿಮಾ ಯಶಸ್ಸಿಗಾಗಿ ನಟ ಯಶ್ ಪೂಜೆ

323
Spread the love

ಸುಬ್ರಹ್ಮಣ್ಯ: ಭಾರಿ ನಿರೀಕ್ಷೆ ಮೂಡಿಸಿರುವ ಕೆಜಿಎಫ್- 2 ಸಿನಿಮಾ ಯಶಸ್ಸಿಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಟ ಯಶ್ ಇಂದು ಪೂಜೆ ಸಲ್ಲಿಸಿದ್ದಾರೆ.

ಯಶ್ ಮತ್ತು ಅವರ ಚಿತ್ರ ತಂಡವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸ್ವಾಗತಿಸಿದರು. ಶ್ರೀ ದೇವರ ದರುಶನ ಪಡೆದ ಬಳಿಕ ಯಶ್ ಪ್ರಸಾದ ಸ್ವೀಕರಿಸಿದರು. ವ್ಯವಸ್ಥಾಪನಾ ಸಮಿತಿ ಸದಸ್ಯೆ ಶೋಭಾ ಗಿರಿಧರ್, ಎಇಒ ಪುಷ್ಪಲತಾ ಮತ್ತಿತರರು ಹಾಜರಿದ್ದರು. ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ -1 ಸಿನಿಮಾ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿತ್ತು. ವಿಶ್ವದಾದ್ಯಂತ ರಾಕಿಂಗ್ ಸ್ಟಾರ್ ಯಶ್ ಅಭಿನಯಕ್ಕೆ ಜನ ಫಿದಾ ಆಗಿದ್ದರು. ಇದೀಗ ಅದರ ಮುಂದುವರಿದ ಭಾಗ ಕೆಜಿಎಫ್- 2 ಭಾರಿ ನಿರೀಕ್ಷೆ ಮೂಡಿಸಿದೆ. ಶೀಘ್ರದಲ್ಲೇ ವಿಶ್ವದಾದ್ಯಂತ ಏಕಕಾಲದಲ್ಲಿ ತೆರೆ ಕಾಣಲಿದೆ. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ತನ್ನದೇ ಆದ ಟ್ರೆಂಡ್ ಸೃಷ್ಟಿಸಿ ವಿಶ್ವದಾದ್ಯಂತ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿರುವ ರಾಕಿಂಗ್ ಸ್ಟಾರ್‌ ಈ ಸಿನಿಮಾಕ್ಕಾಗಿ ಎಂಟು ವರ್ಷ ಅವಿರತ ಶ್ರಮ ಪಟ್ಟಿದ್ದಾರೆ. ಮನಸ್ಸು ಮಾಡಿದ್ದರೆ ಯಶ್ ವರ್ಷಕ್ಕೆ ಒಂದರಂತೆ ಸಿನಿಮಾ ಮಾಡಬಹುದಿತ್ತು. ಆದರೆ ಯಶ್ ಕೆಜಿಎಫ್- ೨ ಸಿನಿಮಾಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಈ ಸಿನಿಮಾ ಇತಿಹಾಸ ಸೃಷ್ಟಿಸಬಹುದೇ, ಯಶ್ ಪ್ರಾರ್ಥನೆ ಫಲಿಸುವುದೇ? ಅನ್ನುವುದನ್ನು ಕಾದು ನೋಡಬೇಕಿದೆ.

See also  ಕಡೆಪಾಲ: ಸ್ವಾಮಿ ಕೊರಗಜ್ಜ ಸೇರಿದಂತೆ ವಿವಿಧ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ
  Ad Widget   Ad Widget   Ad Widget   Ad Widget   Ad Widget   Ad Widget