ಶಿಕ್ಷಣಸುಳ್ಯ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ, ದೇಶಕ್ಕಾಗಿ ಪ್ರಾಣತೆತ್ತ ಹುತಾತ್ಮ ಯೋಧರಿಗೆ ಗೌರವ ನಮನ

ನ್ಯೂಸ್ ನಾಟೌಟ್ : ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಎನ್‌ಸಿಸಿ ವತಿಯಿಂದ ಕಾರ್ಗಿಲ್ ವಿಜಯ ದಿನವನ್ನು ಶುಕ್ರವಾರ (ಜು.26 ) ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಗಿಲ್ ವಿಜಯ್ ಆಪರೇಷನ್ ಕುರಿತು ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರಕುಮಾರ್ ಎಂ.ಎಂ. ಮಾತನಾಡಿದರು. ಕಾಲೇಜಿನ ಗ್ರಂಥಪಾಲಕ ಉಮೇಶ್ ಕಾರ್ಗಿಲ್ ವಿಜಯ ದಿನದ ಶುಭಕೋರಿದರು. ಹುತಾತ್ಮ ಯೋಧರಿಗೆ ಗೌರವಾರ್ಪಣೆಯಾಗಿ ಮೌನಪ್ರಾರ್ಥನೆ ಸಲ್ಲಿಸಲಾಯಿತು. ಎನ್‌ಸಿಸಿ ವತಿಯಿಂದ ಎಲ್ಲಾ ಕೆಡೆಟ್‌ಗಳಿಗೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು. ಮತ್ತು ಕೆಲವು ಹಣ್ಣಿನ ಗಿಡಗಳನ್ನು ಕಾಲೇಜು ಆವರಣದಲ್ಲಿ ನೆಡಲಾಯಿತು. ಎನ್‌ಸಿಸಿ ಅಧಿಕಾರಿ ಲೇ. ಸೀತಾರಾಮ ಎಂ.ಡಿ. ಕಾರ್ಯಕ್ರಮ ಆಯೋಜಿಸಿದರು.

Related posts

ಮುರುಳ್ಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಹಾವು, ಆಸ್ಪತ್ರೆಗೆ ಸಾಗಿಸುತ್ತಿರುವಾಗಲೇ ಕಂದಮ್ಮ ಮೃತ್ಯು