ಕರಾವಳಿಸುಳ್ಯ

ಬೆಳ್ಳಾರೆ: ಕೆಪಿಎಸ್‌ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ,ಖೇಲೋ ಇಂಡಿಯಾಗೆ ಆಯ್ಕೆ; ಮೆರವಣಿಗೆಯೊಂದಿಗೆ ಕ್ರೀಡಾಧಿಕಾರಿ, ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ..!

ನ್ಯೂಸ್ ನಾಟೌಟ್:  ಖೇಲೋ ಇಂಡಿಯಾ (Khelo India) ರಾಷ್ಟ್ರ ಮಟ್ಟದ ಕಬಡ್ಡಿ (Kabaddi) ಪಂದ್ಯಾಟಕ್ಕೆ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು,ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ಇವರಿಬ್ಬರೂ ಬೆಳ್ಳಾರೆಯ (Bellare) ಕೆಪಿಎಸ್‌ನ ವಿದ್ಯಾರ್ಥಿಗಳಾಗಿದ್ದು, ಈ ಸಂದರ್ಭ ಅಲ್ಲಿನ ನಾಗರಿಕರು ವಿದ್ಯಾರ್ಥಿಗಳು ಸೇರಿದಂತೆ ಕ್ರೀಡಾಧಿಕಾರಿಯನ್ನು ಮೆರವಣಿಗೆಯ ಮೂಲಕ ಸಂಸ್ಥೆಗೆ ಆತ್ಮೀಯವಾಗಿ ಬರಮಾಡಿಕೊಂಡಿರುವ ಘಟನೆ ಬಗ್ಗೆ ವರದಿಯಾಗಿದೆ.

ಈ ಬಾರಿ ತೆಲಂಗಾಣದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ (Karnataka) ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ರಾಜ್ಯದ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ ಕಿಶನ್ ದ್ರಾವಿಡ್ ಹಾಗೂ ಹೇಮಂತ ಕೆ. ವಿ ಇವರು ಖೇಲೋ ಇಂಡಿಯಾ ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ. ಇವರ ಜೊತೆ ಖೇಲೋ ಇಂಡಿಯಾ ಕ್ರೀಡಾಧಿಕಾರಿಯಾಗಿ ಬೆಳ್ಳಾರೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಕೂಡ ಆಯ್ಕೆಯಾಗಿದ್ದು ಹೆಮ್ಮೆಯ ವಿಚಾರ.

ಇದೊಂದು ಸುಳ್ಯ ತಾಲೂಕಿನ ಜನತೆ ಖುಷಿ ಪಡಬೇಕಾದ ವಿಚಾರ.ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಂಬಂತೆ ಕೆಪಿಎಸ್‌ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಖೇಲೋ ಇಂಡಿಯಾಗೆ ಆಯ್ಕೆಯಾಗಿ ತಾಲೂಕಿಗೆ ಹಾಗೂ ಬೆಳ್ಳಾರೆಗೆ ಕೀರ್ತಿ ತಂದಿದ್ದಾರೆ. ಈ ವಿಶೇಷ ಸಾಧನೆಗೆ ಊರಿನ ನಾಗರಿಕರು ತೆಲಂಗಾಣದಿಂದ ಬೆಂಗಳೂರು ಮೂಲಕ ಸುಬ್ರಹ್ಮಣ್ಯ ಮಾರ್ಗವಾಗಿ ಆಗಮಿಸಿದ ಇಬ್ಬರು ಆಟಗಾರರನ್ನು ಮತ್ತು ಕ್ರೀಡಾಧಿಕಾರಿ ಪುಷ್ಪಾವತಿ ಇವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿ ಮೆರವಣಿಗೆಯ ಮೂಲಕ ಸಂಸ್ಥೆಗೆ ಬರಮಾಡಿದ್ದಾರೆ.

Related posts

ಸುಳ್ಯ:ಅ.3ರಂದು ಗಾಂಧಿ ಸ್ಮೃತಿ , ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶ;ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ

ಪಿಕಪ್‌ ನಲ್ಲಿ ಚಿನ್ನ ಸಾಗಾಟ! ಬರೋಬ್ಬರಿ 9 ಕೆಜಿ ಚಿನ್ನ ವಶಕ್ಕೆ ಪಡೆದ ಚಿಕ್ಕಮಗಳೂರು ಪೊಲೀಸರು!

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ,ಅಧಿಕೃತ ಘೋಷಣೆಯೊಂದೇ ಬಾಕಿ