ವೈರಲ್ ನ್ಯೂಸ್ಸಿನಿಮಾ

ಕಿಚ್ಚನ ಪುತ್ರಿ ನಟಿಯಾಗಿ ಸಿನಿ ರಂಗಕ್ಕೆ ಎಂಟ್ರಿ..? ಸಾನ್ವಿ ಶೇರ್ ಮಾಡಿದ ಪೋಸ್ಟ್ ನಲ್ಲೇನಿದೆ..?

242

ನ್ಯೂಸ್ ನಾಟೌಟ್: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಪುತ್ರಿ ಸಾನ್ವಿ (Sanvi Sudeep) ಗಾಯಕಿಯಾದ್ದಾರೆ. ಇದರ ನಡುವೆ ನಟಿಯಾಗಿಯೂ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಾರಾ? ಎಂಬ ಪ್ರಶ್ನೆ ಮೂಡಿದೆ. ಅದಕ್ಕೆ ಕಾರಣ, ಸೋಷಿಯಲ್ ಮೀಡಿಯಾದಲ್ಲಿ ಸಾನ್ವಿ ಶೇರ್ ಮಾಡಿರುವ ಹೊಸ ಪೋಸ್ಟ್. ಸುದೀಪ್ ಮಗಳು ಏಕಾಏಕಿ ಶೂಟಿಂಗ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಅದರಲ್ಲೂ ಖಡಕ್ ವಿಲನ್ ಲುಕ್‌ನಲ್ಲಿ ಗನ್ ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಈ ಪೋಸ್ಟ್‌ಗೆ ಲೈಟ್‌, ಕ್ಯಾಮೆರಾ, ಆಕ್ಷನ್‌ ಅಂತ ಸಾನ್ವಿ ಅಡಿಬರಹ ನೀಡಿದ್ದಾರೆ. ಹೀಗಾಗಿ ಅಭಿಮಾನಿಗಳು ನಟಿಯಾಗಿ ನಟಿಸುತ್ತಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಈ ಫೋಟೋ ಸುದೀಪ್ ನಟನೆಯ ‘ಮ್ಯಾಕ್ಸ್’ ಸೆಟ್‌ನದ್ದು ಎಂದು ಹೇಳಲಾಗುತ್ತಿದೆ. ಶೂಟಿಂಗ್ ಮಧ್ಯೆ ತಮಾಷೆಗಾಗಿ ಕಿಚ್ಚನ ಪುತ್ರಿ ಇಂಥದ್ದೊಂದು ಪೋಸ್ ಕೊಟ್ಟಿದ್ದಾರೆ ಎನ್ನಲಾಗಿದೆ. ಮುಂದಿನ ದಿನದಲ್ಲಿ ನಟಿಯಾಗಿ ಎಂಟ್ರಿ ಕೊಟ್ಟರೂ ಅಚ್ಚರಿಯೇನೂ ಇಲ್ಲ.

See also  ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಸುವೋಟೊ ಕೇಸ್..! ಅಷ್ಟಕ್ಕೂ ಸಂಸದ ಹೇಳಿದ್ದೇನು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget