Latestಕ್ರೈಂರಾಜ್ಯ

ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ ಸತೀಶ್ ಜಾರಕಿಹೊಳಿ‌ ಆಪ್ತೆ..! 5ಕೋಟಿ ರೂ. ಗೆ ಬೇಡಿಕೆ..!

534

ನ್ಯೂಸ್‌ ನಾಟೌಟ್ : 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್‌ ಮಾಡಿದ್ದರು. ಕಿಡ್ನ್ಯಾಪ್‌ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್‌ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು.

ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು. ತನಿಖೆ ವೇಳೆ ಕಿಡ್ನ್ಯಾಪ್‌ನ ಮಾಸ್ಟರ್ ಪ್ಲ್ಯಾನ್‌ ಮಾಡಿರುವುದು ಕಿಂಗ್‌ ಪಿನ್ ಮಂಜುಳಾ ಎಂಬ ವಿಚಾರ ತಿಳಿದಿದೆ. ಮಂಜುಳಾ ಮಗ ಈಶ್ವರ ರಾಮಗನಟ್ಟಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ವಿಚಾರ ಬಹಿರಂಗವಾಗಿದೆ.

ಮಗ ಮತ್ತು ಸ್ನೇಹಿತರು, ಮಂಜುಳಾ ನೀಡಿದ ಪ್ಲ್ಯಾನ್‌ ಮೇಲೆ ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ. ತನಿಖೆ ಸಂದರ್ಭದಲ್ಲಿ ಸಿಕ್ಕ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 7 ಜನ ಆರೋಪಿಗಳನ್ನ ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

See also  ಮಂಗಳೂರು: 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ, ಮೂವರು ಅರೆಸ್ಟ್! ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇರುವ ಏನಿದು ಸಮುದ್ರ ನಿಧಿ?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget