ಕರಾವಳಿ

ಉಪ್ಪಿನಂಗಡಿಯಲ್ಲಿ ಸಹೋದರರಿಬ್ಬರ ಕಿಡ್ನಾಪ್ ಮತ್ತು ಪೊಲೀಸರ ಮೇಲೆ ಹಲ್ಲೆ ಕೇಸ್ : ಪ್ರಕರಣ ಬೇಧಿಸಿದ ಪೊಲೀಸರು,ಐವರು ಅರೆಸ್ಟ್

375

ನ್ಯೂಸ್ ನಾಟೌಟ್ : ಉಪ್ಪಿನಂಗಡಿಯ ಸಹೋದರರ ಕಿಡ್ನ್ಯಾಪ್ ಕೇಸ್ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿಯ ಅಬೂಬಕ್ಕರ್ ಸಿದ್ದಿಕ್ ಯಾನೆ ಜೆಸಿಬಿ ಸಿದ್ದಿಕ್, ಬಂಟ್ವಾಳದ ಕಲಂದರ್ ಶಾಫಿ ಗಡಿಯಾರ, ಬಂಟ್ವಾಳದ ಇರ್ಫಾನ್, ಪಾಂಡೇಶ್ವರದ ಮೊಹಮ್ಮದ್ ರಿಯಾಜ್ ಮತ್ತು ಬೆಳ್ತಂಗಡಿಯ ಮೊಹಮ್ಮದ್ ಇರ್ಷಾದ್ ಬಂಧಿತರು.ಇನ್ನು ಸಹೋದರರ ಅಪಹರಣಕ್ಕೆ ಕುಮ್ಮಕ್ಕು ನೀಡಿರುವ ರೌಡಿಶೀಟರ್ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ತಿಳಿದು ಬಂದಿದೆ.

ಹಣದ ಬೇಡಿಕೆ:


ಘಟನೆ ೧ : ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಬಳಿ ವಿದೇಶದಿಂದ ಬಂದ ಸಹೋದರರಿಬ್ಬರನ್ನು ಅಪಹರಿಸಿದ್ದರು. ಮಾತ್ರವಲ್ಲದೇ ಹಲ್ಲೆಯನ್ನೂ ನಡೆಸಿದ ದುಷ್ಕರ್ಮಿಗಳು ಅವರಲ್ಲಿ ಓರ್ವನನ್ನು ಒತ್ತೆ ಇರಿಸಿಕೊಂಡು ಹಣ ತರುವಂತೆ ಬೇಡಿಕೆಯಿಟ್ಟು ಅಣ್ಣನನ್ನು ಮನೆಗೆ ಕಳುಹಿಸಿದ್ದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಣ್ಣ ನಿಜಾಮುದ್ದೀನ್ ಮತ್ತು ತಮ್ಮ ಶಾರುಕ್ ನನ್ನು ಅಪಹರಿಸಲಾಗಿತ್ತು.

ಪೊಲೀಸರ ಮೇಲೆ ಹಲ್ಲೆ:

ಘಟನೆ ೨: ಗುರುವಾರ ತಡರಾತ್ರಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಕುಳ ಗ್ರಾಮದ ತುಪ್ಪೆಕಲ್ಲು ಎಂಬಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಲ್ಲಿಕಾರ್ಜುನ ಅಂಗಡಿ ಮತ್ತು ಪ್ರದೀಪ್ ಎಂಬವರು ಗಸ್ತು ತಿರುಗುತ್ತಿದ್ದರು. ಈ ವೇಳೆ ರೈಲ್ವೆ ಹಳಿ ಬಳಿ ಕೆಲವರು ಮಾತನಾಡುತ್ತಿದ್ದದ್ದನ್ನು ಕಂಡು ವಿಚಾರಿಸಲು ಹೋದಾಗ ಅವರು ಪೊಲೀಸರ ಮೇಲೆ ಕಲ್ಲು ಎಸೆದು ಹಲ್ಲೆ ಮಾಡಿ, ಕಾರು ಹಾಯಿಸಿ ಕೊಲೆ ಯತ್ನ ನಡೆಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಿಡ್ನಾಪ್ ರಹಸ್ಯ ಬಯಲು:


ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಪೊಲೀಸರು ಸಿದ್ದಿಕ್, ಕಲಂದರ್ ಶಾಫಿ ಗಡಿಯಾರ, ಇರ್ಫಾನ್ ಮತ್ತು ಮೊಹಮ್ಮದ್ ಇರ್ಷಾದ್ ನನ್ನು ವಿಚಾರಣೆ ಮಾಡುವ ವೇಳೆ ಉಪ್ಪಿನಂಗಡಿ ಕಿಡ್ನಾಪ್ ರಹಸ್ಯ ಹೊರಬಿದ್ದಿದೆ. ಆದ್ರೆ ಅರೋಪಿಗಳನ್ನು ಹಿಡಿಯುವ ವೇಳೆ ಅವರ ಜತೆ ಉಪ್ಪಿನಂಗಡಿಯಲ್ಲಿ ಕಿಡ್ನಾಪ್ ಆಗಿದ್ದ ಶಾರುಕ್ ಕೂಡಾ ಜತೆಗಿದ್ದ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಎಲ್ಲಾ ಮಾಹಿತಿ ಬಹಿರಂಗ ಪಡಿಸಿದ್ದಾರೆ.ಐವರು ಆರೋಪಿಗಳ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನ ರೌಡಿ ಶೀಟರ್ ಒಬ್ಬನ ನಿರ್ದೇಶನದ ಮೇರೆಗೆ ಶಾರುಖ್ ನನ್ನು ಕಿಡ್ನಾಪ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಪ್ರಮುಖ ಆರೋಪಿಯನ್ನು ಇನ್ನಷ್ಟೇ ಬಂಧಿಸಬೇಕಿದೆ. ಈ ರೌಡಿ ಶೀಟರ್ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿವೆ ಎಂಬ ಮಾಹಿತಿ ಹೊರಬಿದ್ದಿದೆ.

See also  ಕಡಬ: ಹಲವು ಸಲಕರಣೆ,ಸಾಮಗ್ರಿಗಳಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ,ಅಪಾರ ನಷ್ಟ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget