ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೈಪಡ್ಕ ಎಂಬಲ್ಲಿ ಅಂದಾಜು ಹನ್ನೆರಡು ಅಡಿ ಉದ್ದದ ಕಾಳಿಂಗ ಸರ್ಪವೊಂದನ್ನು ಇತ್ತೀಚೆಗೆ ಸೆರೆ ಹಿಡಿಯಲಾಗಿದೆ. ಕಾಂಟ್ರಾಕ್ಟರ್ ಅಬ್ರಾಹಂ ಎಂಬುವವರ ಮನೆಯ ಸಮೀಪದ ಮರದಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ತಕ್ಷಣ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದ್ದು ಉರಗ ತಜ್ಞರಾದ ಮೋಹನ್ ಅರಂಬೂರು, ಶರತ್ ಕೀಲಾರು ಸಂಪಾಜೆ, ಅರಣ್ಯಾಧಿಕಾರಿ ಚಂದ್ರು ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಯಶಸ್ವಿಯಾಗಿ ಹಿಡಿದಿದ್ದಾರೆ. ಆ ಬಳಿಕ ಅದನ್ನು ಸುರಕ್ಷಿತವಾಗಿ ರಕ್ಷಿತಾರಣ್ಯಕ್ಕೆ ಬಿಡಲಾಗಿದೆ.


