ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ನಟ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ಇಂದು(ಜೂ.17) ಸೂಚನೆ ನೀಡಿದೆ.
ಥಗ್ ಲೈಫ್ ಗೆ ಸುಪ್ರೀಂ ಕಡೆಯಿಂದ ರಿಲೀಫ್ ಸಿಕ್ಕಿದೆ. ಕರ್ನಾಟಕದಲ್ಲಿ ಸಿನಿಮಾ ರಿಲೀಸ್ ಗೆ ಅವಕಾಶ ಕೊಟ್ಟಿದೆ. ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಪಡಿಸಬೇಡಿ. ರಿಲೀಸ್ ಆಗಬೇಕು. ನಿಮಗೆ ಇಷ್ಟ ಇಲ್ಲದಿದ್ದರೆ ಸಿನಿಮಾ ನೋಡಬೇಡಿ. ತಡೆ ನಿಡೋದು, ಬೆದರಿಕೆ ಒಡ್ಡೋದು ಸರಿಯಲ್ಲ ಎಂದು ಆದೇಶ ನೀಡಿದೆ.
ಕನ್ನಡ ತಮಿಳಿನಿಂದ ಉಗಮವಾಗಿದೆ ಅನ್ನುವ ಕಮಲ್ ಹೇಳಿಕೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕಮಲ್ ನಟನೆಯ ಥಗ್ ಲೈಫ್ ಸಿನಿಮಾವನ್ನ (Thug Life Movie) ಕರ್ನಾಟಕದಿಂದ ದೂರ ಇಡಲಾಗಿತ್ತು. ಕರ್ನಾಟಕ ಹೈಕೋರ್ಟ್ ಛೀಮಾರಿ ಹಾಕಿದರೂ ಸಹ ಸುಪ್ರಿಂ ಮೆಟ್ಟಿಲೇರಿದ್ದ ಕಮಲ್ ಹಾಸನ್ ಗೆ ಈಗ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಆದೇಶ ನೀಡಿದೆ.