Latestಮಂಗಳೂರುವಾಣಿಜ್ಯ

ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸಿ ದಾಖಲೆ ಬರೆದ ಕೆಎಂಎಫ್..!​ ಹೊಸ ಬೇಕರಿ ಉತ್ಪನ್ನಗಳ ಸೇರ್ಪಡೆ..!

562

ನ್ಯೂಸ್‌ ನಾಟೌಟ್‌: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಮೇ 22 ರ ನಂತರ ಈ ದಾಖಲೆ ನಡೆದಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ ​ಗೆ ಸಾಧ್ಯವಾಗಿದೆ ಎನ್ನಲಾಗಿದೆ.

ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು.ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆ ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಕೊಡುಗೆ ನೀಡಿವೆ.

ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ, ಕೆಎಂಎಫ್ ತನ್ನ ಜನಪ್ರಿಯ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 18 ಹೊಸ ಬಗೆಯ ಕೇಕ್​ಗಳು ಮತ್ತು ಇತರ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡಿದೆ. ಕೆಎಂಎಫ್ ಮತ್ತು ಅದರ ಅಂಗಸಂಸ್ಥೆಗಳಾದ ಹಾಲು ಒಕ್ಕೂಟಗಳು ಈಗಾಗಲೇ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ನಂದಿನಿ ಹಲ್ವಾ, ಬ್ರೆಡ್, ಬನ್ ​​ಗಳು ಮತ್ತು ಐಸ್ ಕ್ರೀಮ್ ಸೇರಿದಂತೆ 150 ಕ್ಕೂ ಹೆಚ್ಚು ಉತ್ಪನ್ನಗಳನ್ನು ಮಾರಾಟ ಮಾಡುತ್ತಿವೆ. ಇದೀಗ ಹೊಸ ಬೇಕರಿ ಉತ್ಪನ್ನಗಳ ಸೇರ್ಪಡೆಯೊಂದಿಗೆ, ಕೆಎಂಎಫ್ ಉದ್ಯಮ ಮತ್ತಷ್ಟು ವಿಸ್ತರಣೆಯಾದಂತಾಗಿದೆ.

RCB ತಂಡದ ಮಾಜಿ ಮಾಲೀಕ ವಿಜಯ್‌ ಮಲ್ಯ ಭಾವುಕ ಪೋಸ್ಟ್‌..! “ನಾನು ಆರ್‌ ಸಿಬಿಯನ್ನು ಸ್ಥಾಪಿಸಿದಾಗ..!”

ಇಂದು(ಜೂ.4) ಬೆಂಗಳೂರಿನಲ್ಲಿ ಆರ್‌ ಸಿ ಬಿ ವಿಜಯಯಾತ್ರೆ, ಆಟಗಾರರನ್ನು ಸನ್ಮಾನಿಸಲಿರುವ ಸಿಎಂ ಸಿದ್ದರಾಮಯ್ಯ

See also  ಧರ್ಮಸ್ಥಳ:ಏರೋಸ್ಪೇಸ್ ಎಂಜಿನಿಯರ್ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ;ಕೇರಳದ 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget