ಬೆಂಗಳೂರು: ಅರ್ಜುನ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಹಿರಿಯ ಕಬಡ್ಡಿ ಪಟು ಹಾಗೂ ಭಾರತ ಸರಕಾರದ ಹಾಲಿ ಆಲ್ ಇಂಡಿಯಾ ಸ್ಪೋರ್ಟ್ಸ್ ಕೌನ್ಸಿಲ್ ಸದಸ್ಯ ಡಾ.ಸಿ ಹೊನ್ನಪ್ಪ ಗೌಡ ಅವರನ್ನು ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ (ಕೆಒಎ) ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಾಲ್ ಆಫ್ ಫೇಮ್ ನಲ್ಲಿ ಅವರ ಫೋಟೋ ಹಾಗೂ ಸನ್ಮಾನ ಮಾಡಿ ಗೌರವಿಸಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸನ್ಮಾನಿಸಿದರು. ಕ್ರೀಡಾ ಸಚಿವ ನಾರಾಯಣ ಗೌಡ, ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷ ಕೆ.ಗೋವಿಂದರಾಜು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.