ಕರಾವಳಿಕೊಡಗು

ಮಡಿಕೇರಿ:ಕೊಡಗು ಜಿಲ್ಲಾ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ!! 40 ಮಂದಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ!!

ನ್ಯೂಸ್ ನಾಟೌಟ್ :ಕೊಡಗು ಜಿಲ್ಲಾ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬರೋಬ್ಬರಿ ೪೦ ಮಂದಿ ಮುಖಂಡರು ಕಾಂಗ್ರೆಸ್‌ ಗೆ ಸೇರ್ಪಡೆಯಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನಿಂದ ಸುಮಾರು 40 ಮಂದಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದು,ಬಿಜೆಪಿ ಮತ್ತು ಜೆಡಿಎಸ್‌ಗೆ ತಲೆನೋವಾಗಿ ಪರಿಣಮಿಸಿದೆ.

ಅಶ್ರಫ್, ಇಸಾಕ್, ಮಂಜುನಾಥ್, ಮೋಹನ್ ಮೌರ್ಯ, ಗಣೇಶ್, ಲೀಲಾ ಶೇಷಮ್ಮ, ಸುನಂದಾ, ಸವಿತಾ, ಕವಿತಾ ಸೇರಿದಂತೆ ಹಲವು ಮಂದಿ ಮುಖಂಡರು ನಗರಸಭೆ ಸದಸ್ಯ ರಾಜೇಶ್ ಯಲ್ಲಪ್ಪ ಅವರ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇವರನ್ನು ಶಾಸಕ ಡಾ.ಮಂತರ್‌ಗೌಡ ಪಕ್ಷಕ್ಕೆ ಬರಮಾಡಿಕೊಂಡರು.ನಂತರ ಮಾತನಾಡಿದ ಶಾಸಕರು, ‘ಕೊಡಗು ವಿಧಾನಸಭೆಯಲ್ಲಿ ಹೇಗೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಿರೋ ಹಾಗೆಯೇ ಲೋಕಸಭೆಯಲ್ಲೂ ಗೆಲ್ಲಿಸಬೇಕು. ಯಾವುದೇ ಕಾರಣಕ್ಕೂ ಕಾರ್ಯಕರ್ತರು ಮೈಮರೆಯಬಾರದು’ ಎಂದು ಹೇಳಿದರು.ವಿಧಾನಪರಿಷತ್ತಿನ ನಿಕಟಪೂರ್ವ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ‘ಹಿಂದಿನ ಚುನಾವಣೆಯಂತೆ ಕಾಂಗ್ರೆಸ್‌ನ್ನು ಗೆಲ್ಲಿಸುವ ಪಣವನ್ನು ಪಕ್ಷದ ಕಾರ್ಯಕರ್ತರು ತೊಡಬೇಕು’ ಎಂದು ತಿಳಿಸಿದರು.

ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ‘ಕಳೆದ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಮೊದಲಿಗೆ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಮತದಾನದ ದಿನ ಸಮೀಪಿಸುತ್ತಿದ್ದಂತೆ ಸಾಮಾನ್ಯ ಜನರ ಒಲವು ಕಾಂಗ್ರೆಸ್‌ನತ್ತ ಬಂದಿತು. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಖಚಿತ’ ಎಂದು ಹೇಳಿದರು.

Related posts

ಫಾಜಿಲ್ ಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿತು ಮಹತ್ತರ ಸುಳಿವು?

ಹಿಟ್ಟಿನ ಗಿರಣಿ ಬೆಲ್ ಗೆ ಸಿಲುಕಿಕೊಂಡ ತಾಯಿ ತಲೆ: ಅಮ್ಮನನ್ನು ಬದುಕಿಸಿದ 9 ವರ್ಷದ ಮಗ ‘ರಾಷ್ಟ್ರೀಯ ಶೌರ್ಯ ಪ್ರಶಸ್ತಿ’ಗೆ ಆಯ್ಕೆ

ಮಂಗಳೂರು: ಸರ್ವೀಸ್ ರಿವಾಲ್ವರ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಸಿಐಎಸ್ಎಫ್ ಪಿಎಸ್ಸೈ..!, ಭದ್ರತಾ ಪಡೆಯ ಸಿಬ್ಬಂದಿ ಈ ನಿರ್ಧಾರ ಕೈಗೊಂಡಿದ್ಯಾಕೆ..?