ಕರಾವಳಿಕೊಡಗುಕ್ರೈಂವೈರಲ್ ನ್ಯೂಸ್

ಕೊಡಗು: ಬೈಕ್ ಗುದ್ದಿ ಯುವಕ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ದುರಂತಕ್ಕೆ ನಾನೇ ಕಾರಣವೆಂದು ಬೈಕ್ ಸವಾರ ಆತ್ಮಹತ್ಯೆ..! ಇಲ್ಲಿದೆ ಮನಕಲಕೋ ಘಟನೆ

ನ್ಯೂಸ್‌ ನಾಟೌಟ್‌: ಮಡಿಕೇರಿಯಲ್ಲಿ ಕಳೆದ ಶುಕ್ರವಾರ ನಡೆದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಸಾವನ್ನಪ್ಪಿದ್ದನು. ಆದರೆ, ಈ ಅಪಘಾತಕ್ಕೆ ತಾನೇ ಕಾರಣವೆಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿ ತಿಳಿಸಿದೆ.

ರಸ್ತೆ ಅಪಘಾತಕ್ಕೆ ನಾನೇ ಕಾರಣವೆಂದು ದ್ವಿಚಕ್ರ ವಾಹನ ಸವಾರ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಡಿಕೇರಿಯಲ್ಲಿ ನಡೆದಿದೆ. ಹೆರವನಾಡಿನ ತಮ್ಮಯ್ಯ (57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ವರದಿ ತಿಳಿಸಿದೆ. ಮಡಿಕೇರಿಯಲ್ಲಿ ಶುಕ್ರವಾರ(9.ಫೆ) ಧನಲ್ ಸುಬ್ಬಯ್ಯ ಹಾಗೂ ತಮ್ಮಯ್ಯ ಎಂಬವರ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.

ಮಡಿಕೇರಿಯ ಚೈನ್ ಗೇಟ್ ಬಳಿ ನಡೆದಿದ್ದ ಅಪಘಾತದಲ್ಲಿ ಮಾಸ್ಟರ್ ಡಿಗ್ರಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಧನಲ್ ಸುಬ್ಬಯ್ಯ ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಧನಲ್ ಸುಬ್ಬಯ್ಯನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ನಿನ್ನೆ ಬೆಳಗ್ಗಿನ ಜಾವ ಧನಲ್ ಸಾವನ್ನಪ್ಪಿದ್ದನು.

ಮೃತ ಯುವಕ ಧನಲ್ ಸುಬ್ಬಯ್ಯ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿಯಾಗಿದ್ದನು. ಇನ್ನು ಈ ಅಪಘಾತಕ್ಕೆ ನಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಎನ್ನಲಾಗಿದೆ. ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಯುವಕ ಸಾವನ್ನಪ್ಪಿದ್ದಾನೆ. ಆದರೆ, ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು. ಆದರೆ, ಈ ಅಪಘಾತಕ್ಕೆ ನಾನೇ ಕಾರಣವೆಂದು ತೀವ್ರ ಪಶ್ಚಾತ್ತಾಪದಿಂದ ಬಳಲುತ್ತಿದ್ದ ಸುಬ್ಬಯ್ಯ ಕೂಡ ಇಂದು ಬೆಳಗಿನ ಜಾವ ನೇಣು ಹಾಕಿಕೊಂಡಿರುವುದಾಗಿ ವರದಿ ತಿಳಿಸಿದೆ.

Related posts

ಸುಳ್ಯ: ಹಲವೆಡೆ ರಾರಾಜಿಸುತ್ತಿವೆ ಮತದಾನ ಬಹಿಷ್ಕಾರದ ಬ್ಯಾನರ್‌! ಏನಿದರ ಕಾರಣ?

ಹುಡುಗಿ ಮದುವೆಗೆ ಒಪ್ಪಿಲಿಲ್ಲವೆಂದು 800 ಅಡಿಕೆ ಮರವನ್ನು ಕಡಿದು ಹಾಕಿದ ಯುವಕ..! ಅರ್ಧ ಎಕರೆ ಶುಂಠಿ ಬೆಳೆಯೂ ಸರ್ವನಾಶ ಮಾಡಿದ ಈ ಭೂಪ ಯಾರು?

ಕಾರ್ಕಳ:ಕಾಂಗ್ರೆಸ್ ಅಭ್ಯರ್ಥಿ ಅನುಯಾಯಿಗಳಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆರೋಪ,ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಿ-ಬಿಜೆಪಿ ಒತ್ತಾಯ