Latestಕೊಡಗುಕ್ರೈಂಬೆಂಗಳೂರುರಾಜಕೀಯವೈರಲ್ ನ್ಯೂಸ್

ಕೊಡಗು: ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣ..! ಶಾಸಕ ಪೊನ್ನಣ್ಣ ಮತ್ತು ಮಂಥರ್ ಗೌಡ ವಿರುದ್ಧ ದೂರು ದಾಖಲು..!

917
Spread the love

ನ್ಯೂಸ್ ನಾಟೌಟ್: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಡಗಿನ ಕಾಂಗ್ರೆಸ್ ಶಾಸಕ ಎ.ಎಸ್. ಪೊನ್ನಣ್ಣ, ಮಂಥರ್ ಗೌಡ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ನಿವಾಸಿ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ(32) ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಕೊಡಗು ಸಮಸ್ಯೆಗಳು’ ಎನ್ನುವ ವಾಟ್ಸ್ ಆ್ಯಪ್ ಗ್ರೂಪ್ ಅಡ್ಮಿನ್ ಆಗಿದ್ದ ವಿನಯ್ ಮರಣ ಪತ್ರ ಬರೆದಿಟ್ಟಿದ್ದರು. ರಾಜಕೀಯ ಪ್ರೇರಿತ ಎಫ್.ಐ.ಆರ್.ನಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಮರಣ ಪತ್ರದಲ್ಲಿತ್ತು, ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿ ವಿನಯ್ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.

ಕೆಲ ಸಮಯದ ಹಿಂದೆ ಶಾಸಕ ಎ.ಎಸ್.ಪೊನ್ನಣ್ಣ ಬಗ್ಗೆ ವಿನಯ್ ಸೋಮಯ್ಯ ಅಪಹಾಸ್ಯ ಮಾಡಿ ವಾಟ್ಸ್ ಆ್ಯಪ್ ಪೋಸ್ಟ್ ಮಾಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನ್ನೀರಾ ಮೈನಾ ಪೊಲೀಸ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ವಿರುದ್ಧ ಎಫ್.ಐ.ಆರ್ ದಾಖಲಾಗಿತ್ತು.

ಇದೇ ಕಾರಣಕ್ಕೆ ಮೂವರ ಕಿರುಕುಳದಿಂದ ನೊಂದು ತನ್ನ ಸಹೋದರ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ವಿನಯ್ ಸಹೋದರ ಜೀವನ್ ಸೋಮಯ್ಯ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿಡ್ರಗ್ಸ್​ ಜೊತೆ ಸಿಕ್ಕಿಬಿದ್ದ ಮಹಿಳಾ ಪೊಲೀಸ್ ಅಧಿಕಾರಿ ಅರೆಸ್ಟ್​..! ಆ್ಯಂಟಿ ನಾಕ್ರೊಟಿಕ್ಸ್​ ಟಾಸ್ಕ್​ ಫೋರ್ಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಕೆಯಿಂದಲೇ ಕೃತ್ಯ..!

See also  ಈಶ್ವರಮಂಗಲ: ಮೈಸೂರಿನ ಫೋಟೋಗ್ರಾಫರ್ ಮುಗುಳಿಗುಡ್ಡೆಯಲ್ಲಿ ಭೀಕರ ಕೊಲೆ, ನಾಪತ್ತೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್
  Ad Widget   Ad Widget   Ad Widget   Ad Widget   Ad Widget   Ad Widget