ನ್ಯೂಸ್ ನಾಟೌಟ್: ದೇಶಾದ್ಯಂತ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಒಂದಷ್ಟು ರಾಜ್ಯಗಳಲ್ಲಿ ಪರಿಸ್ಥಿತಿ ಕೈ ಮೀರಿರುವುದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲೂ ಕರೋನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿದೆ. ಅಚ್ಚರಿ ಎಂದರೆ ಕೊಡಗಿನಲ್ಲಿ ಒಟ್ಟು 39 ಸಕ್ರಿಯ ಪ್ರಕರಣಗಳು ವರದಿಯಾಗಿದೆ. ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಸದ್ಯ ಕೊಡಗಿನಲ್ಲಿರುವ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 17 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
previous post