Latestಕ್ರೈಂ

ಕೊಡಗು: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ..! ಒಂದು ವಾರದ ಹಿಂದೆ ಬೆಂಗಳೂರಿಗೆ ತೆರಳಿದ್ದ ಪತ್ನಿ ಮತ್ತು ಪುತ್ರಿ..!

1.1k

ನ್ಯೂಸ್‌ ನಾಟೌಟ್: ಜೀವನದಲ್ಲಿ ಜಿಗುಪ್ಸೆಗೊಂಡು ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ನಡೆದಿದೆ.

ನಾರೂರು ಮನೆ ಮಧು (ಅಶೋಕ್) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮದ್ಯ ಸೇವಿಸಿ ತಲೆಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂರು ವರ್ಷದ ಪುತ್ರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಒಂದು ವಾರದ ಹಿಂದೆ ಪತ್ನಿ ಮತ್ತು ಪುತ್ರಿ ಬೆಂಗಳೂರಿಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಮೃತನ ತಾಯಿ ಕೂಡ ಬೆಂಗಳೂರಿಗೆ ತೆರಳಿದ್ದರು. ಈ ಸಂದರ್ಭ ತನ್ನ ಮನೆಯಲ್ಲಿ ಇದ್ದ ಡಬ್ಬಲ್ ಬ್ಯಾರೆಲ್ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಟವಾಡುತ್ತಾ ಕಾರಿನೊಳಗೆ ಹೋದ 4 ಮಕ್ಕಳು ಹೊರಬರಲಾರದೆ ಸಾವು..! ಕಾರಿನ ಮಾಲೀಕನಿಗಾಗಿ ಹುಡುಕಾಟ..!

ಧರ್ಮಸ್ಥಳ:ಏರೋಸ್ಪೇಸ್ ಎಂಜಿನಿಯರ್ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ ;ಕೇರಳದ 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ!

See also  ಕನಕಮಜಲು ಹಿಟ್ ಆ್ಯಂಡ್ ರನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಒಬ್ಬರಲ್ಲ ಇಬ್ಬರಿಗೆ ಗುದ್ದಿ ಕಾರು ಚಾಲಕ ಪರಾರಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget