ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ಮಾವು ಮತ್ತು ಹಲಸು ಮೇಳ 2025ಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಹಾಪ್ ಕಾಮ್ಸ್ ವತಿಯಿಂದ ಈ ಮೇಳ ನಡೆಯಲಿದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾವು ಮತ್ತು ಹಲಸು ಮೇಳ 2025ಕ್ಕೆ ಇಂದು(ಮೇ.25) ಚಾಲನೆ ನೀಡಿದರು. ಮಡಿಕೇರಿ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮಾವು ಮತ್ತು ಹಲಸು ಮೇಳ ನಡೆಯಲಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ತೋಟಗಾರಿಕೆ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ನೀಡಲಾಗಿದೆ.
“ಮಾವು ಮತ್ತು ಹಲಸು ಮೇಳಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಜನರು ಬರುವುದರಿಂದ ಬಹಳ ಸಂತಸವಾಗುತ್ತದೆ. ಮಾವು ಮತ್ತು ಹಲಸು ಮೇಳವನ್ನು ಈ ವರ್ಷವೂ ನಾಲ್ಕು ದಿನಗಳವರೆಗೆ ಏರ್ಪಡಿಸಲಾಗಿದೆ” ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಮಾವು ಮೇಳದಲ್ಲಿ ಮಲಗೋವಾ, ಸಿಂಧೂರಿ, ರಸಪೂರಿ, ತೋತಾಪುರಿ, ಬಾದಾಮಿ, ಮಲ್ಲಿಕಾ, ದಸೇರಿ ಹಣ್ಣುಗಳನ್ನು ನೈಸರ್ಗಿಕವಾಗಿ ಮಾಗಿಸಿ ರೈತರಿಂದ ಗ್ರಾಹಕರಿಗೆ ಯೋಗ್ಯ ಬೆಲೆಗೆ ನೇರವಾಗಿ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ..! ಒಂದು ಗಂಟೆಯೊಳಗೆ ಪ್ರಯಾಣಿಕರ ಸಮೇತ ನದಿಗೆ ಬಿದ್ದ 2 ಕಾರುಗಳು..!